ಬೆಂಗಳೂರು,ಏ.3-
ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಸ್ಯಾಂಡಲ್ ವುಡ್ ನ
ಖ್ಯಾತ ನಿರ್ಮಾಪಕ ಎಂ ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನವರಸ ನಾಯಕ ಜಗ್ಗೇಶ್ ಅವರು ನೀಡಿರುವ 1.25 ಕೋಟಿ ರೂ ಹಣ ವಂಚನೆ ಪ್ರಕರಣಕ್ಕೆ ಸಂಬಂಧ ಎಂಎನ್ ಕುಮಾರ್ ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ.
ಸುದೀಪ್ ನಟನೆಯ ‘ಮಾಣಿಕ್ಯ’ ಪುನೀತ್ ಅಭಿನಯದ ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಎಂಎನ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಪ್ರಭಾವಿ ನಿರ್ಮಾಪಕ ಎಂದು ಗುರುತಿಸಲ್ಪಟ್ಟಿದ್ದಾರೆ.
ಜಗ್ಗೇಶ್ ಅವರು ಎಂಎನ್ ಕುಮಾರ್ ಅವರ ಮೇಲೆ ಯಾವ ಕಾರಣಕ್ಕೆ ದೂರು ನೀಡಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಸಾಲದ ಹಣವೋ ಅಥವಾ ಸಂಭಾವನೆ ಬಾಕಿ ಮೊತ್ತವೇ ಎಂಬ ಬಗ್ಗೆ ಇನ್ನಷ್ಟು ವಿವರಗಳು ತಿಳಿಯಬೇಕಿದೆ.
ಎಂಎನ್ ಕುಮಾರ್ ಅವರು ಈ ಹಿಂದೆ ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಅಡ್ವಾನ್ಸ್ ಪಡೆದಿದ್ದ ಸುದೀಪ್ ಸಿನಿಮಾಕ್ಕೆ ಡೇಟ್ಸ್ ನೀಡಿಲ್ಲ, ಅಡ್ವಾನ್ಸ್ ಹಣವನ್ನೂ ಸಹ ವಾಪಸ್ ಮಾಡಿಲ್ಲ ಎಂದು ಆರೋಪ ಮಾಡಿದ್ದರು. ಫಿಲಂ ಚೇಂಬರ್ ಎದುರು ಸುದೀಪ್ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದರು ಎಂಎನ್ ಸುರೇಶ್. ಆ ಬಳಿಕ ನಟ ಸುದೀಪ್ ಅವರು ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ ಚಾಲ್ತಿಯಲ್ಲಿದೆ.
Previous Articleಇಸ್ಪೀಟ್ ಆಡುತ್ತಿದ್ದವರನ್ನು ವಿವಸ್ತ್ರಗೊಳಿಸಿ ದರೋಡೆ
Next Article ಬಿಕ್ಕಿಬಿಕ್ಕಿ ಅತ್ತ ಪ್ರಜ್ವಲ್ ರೇವಣ್ಣ