Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾರಂಪರಿಕ ಕಟ್ಟಡಗಳ ಉಳಿವಿಗೆ ಬೀದಿಗಿಳಿದ ಯದುವೀರ್
    ಸುದ್ದಿ

    ಪಾರಂಪರಿಕ ಕಟ್ಟಡಗಳ ಉಳಿವಿಗೆ ಬೀದಿಗಿಳಿದ ಯದುವೀರ್

    vartha chakraBy vartha chakraಏಪ್ರಿಲ್ 20, 2022Updated:ಏಪ್ರಿಲ್ 21, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರಿನ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ ಸ್ಟೋನ್ ಕಟ್ಟಡ ನೆಲಸಮಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರ ವಿರೋಧಿಸಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
    ಮೈಸೂರಿನ ಹೃದಯ ಭಾಗದಲ್ಲಿರುವ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ,ಲ್ಯಾನ್ ಸ್ಟೋನ್ ಕಟ್ಟಡ ನೆಲಸಮ ಮಾಡಿ ಪುನರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕೆ ವರ್ತಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಇವರ ಬೆಂಬಲಕ್ಕೆ ನಿಂತ ರಾಜವಂಶಸ್ಥ ಯದುವೀರ್, ಅಭಿವೃದ್ಧಿ ನೆಪದಲ್ಲಿ ಐತಿಹಾಸಿಕ ಕಟ್ಟಡಗಳ ನೆಲಸಮ ಬೇಡ ಎಂದು ಆಗ್ರಹಿಸಿದ್ದಾರೆ.

    ಪ್ರತಿಭಟನೆ ವೇಳೆ ಮಾತನಾಡಿದ ಯದುವೀರ್ ಒಡೆಯರ್, ಮೈಸೂರಿನ ಪ್ರತಿಯೊಬ್ಬರ ಹೃದಯಕ್ಕೂ ಹತ್ತಿರವಾಗಿದೆ ಈ ದೇವರಾಜ ಮಾರುಕಟ್ಟೆ. ತಜ್ಞರೇ ಹೇಳಿದ್ದಾರೆ ದೇವರಾಜ ಮಾರುಕಟ್ಟೆಯನ್ನ ಸಂರಕ್ಷಿಸಬಹುದು ಅಂತ. ನಮ್ಮ ಪೂರ್ವಜರು ಕಟ್ಟಿದ ಪಾರಂಪರಿಕ ಕಟ್ಟಡಗಳನ್ನ ನೋಡಿ ನಾವು ಬೆಳೆದಿದ್ದೇವೆ. ಇದೇ ನಮ್ಮ ಮೈಸೂರಿನ‌ ಕಲೆ, ಇದನ್ನೇ ನಮ್ಮ‌ ಮುಂದಿನ ಪೀಳಿಗೆಗೆ ಕೊಡಬೇಕಿದೆ. ಈ ಪರಂಪರೆಯನ್ನ ಕಾಪಾಡದಿದ್ರೆ ಮೈಸೂರಿನ ಐಡೆಂಟಿಟಿ ಉಳಿಯಲ್ಲ‌. ಮೈಸೂರಿನ ನಾಗರೀಕ ಸಮುದಾಯ ಆರಂಭವಾಗಿದ್ದು ದೇವರಾಜ ಮಾರುಕಟ್ಟೆಯಿಂದ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಸರಿಯಾದ ಕ್ರಮ‌ ಕೈಗೊಳ್ಳುತ್ತೆ ಅನ್ನೋ ವಿಶ್ವಾಸವಿದೆ. ಪಾರಂಪರಿಕ ಸಮಿತಿಯಲ್ಲಿ ಯಾರು ಇರಬೇಕಿತ್ತೋ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಸಿ ಅನುಮೋದನೆ ಪಡೆಯಲಾಗಿದೆ. ಪಾರಂಪರಿಕ ಕಟ್ಟಡಗಳ ಉಳಿವಿಗೆ ಸದಾ ನನ್ನ ಬೆಂಬಲ ಇರುತ್ತೆ. ನೂರಕ್ಕೆ‌ನೂರು ನಾನು ನಿಮ್ಮ ಜೊತೆ ಇರ್ತೀನಿ ಎಂದು ಭರವಸೆ ನೀಡಿದರು.

    ಹಾಗೆಯೇ ಮಾತು ಮುಂದುರೆಸಿದ ಯುದುವೀರ್, ಮೈಸೂರು ಅರಮನೆ ಕಟ್ಟಿ 100 ವರ್ಷದ ಮೇಲಾಗಿದೆ ಎಂದು ಅರಮನೆ ಕೆಡವಿ ಬೇರೆ ಕಟ್ಟಲು ಆಗುತ್ತಾ.? ಮೈಸೂರಿನ ಸಂಸ್ಕೃತಿ ಪಾರಂಪರಿಕ ಕಟ್ಟಡಗಳ ಜೊತೆ ಬೆರೆತಿದೆ. ನೂರು ವರ್ಷ ಆಗಿದೆ ಎಂದು ಕಟ್ಟಡಗಳನ್ನು ಹೊಡೆಯುತ್ತಾ ಹೋದರೆ ಪಾರಂಪರಿಕತೆ ಉಳಿಯುತ್ತಾ? ಒಂದು ಪಾರಂಪರಿಕ ಕಟ್ಟಡ ಕೆಡವಿದ ಮೇಲೆ ಅದೇ ಮಾದರಿಯಲ್ಲಿ ಕಟ್ಟಿದರೂ ಕೂಡಾ ಆ ಕಟ್ಟಡಕ್ಕೆ ಹಳೇ ಇತಿಹಾಸ ಬರುವುದಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪಾರಂಪರಿಕ ಕಟ್ಟಡ ಉಳಿಸುವ ಹೊಸ ತಜ್ಞರ ಸಮಿತಿ ರಚನೆ ಮಾಡಬೇಕು. ಜನರ ಅಭಿಪ್ರಾಯಗಳಿಗೆ, ಭಾವನಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿ ಎಂದರು.

    ನಮ್ಮ ವಂಶದ ಖಾಸಗಿ ಆಸ್ತಿಗಳ ನವೀಕರಣ ಅದು ಬೇರೆ ವಿಚಾರ. ಆದರೆ ಸಾರ್ವಜನಿಕರ ಸ್ವತ್ತಿನ ಕಟ್ಟಡಗಳದ್ದು ಬೇರೆಯ ವಿಚಾರ. ಅರಮನೆಯ ಆಸ್ತಿಯ ವಿಚಾರಕ್ಕೂ ಸಾರ್ವಜನಿಕರ ಸ್ವತ್ತಿನ ಪಾರಂಪರಿಕ ಕಟ್ಟಡಗಳಿಗೂ ಸಂಬಂಧ ಕಲ್ಪಿಸಬೇಡಿ. ದೇವರಾಜ ಮಾರುಕಟ್ಟೆ ನಮ್ನ ವ್ಯಾಪ್ತಿಗೆ ಕೊಟ್ಟರೇ ನಾವೇ ಪುನಶ್ಚೇತನ ಮಾಡುತ್ತೇವೆಂಬ ಪ್ರಮೋದಾದೇವಿ ಒಡೆಯರ್ ಹೇಳಿಕೆ ವಿಚಾರ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಅದನ್ನ ಅವರ ಬಳಿಯೇ ಕೇಳಿ. ನಾನು ಅದಕ್ಕೆ ಪ್ರತಿಕ್ರಿಯಿಸಲ್ಲ ಎಂದು ಯದುವೀರ್ ತಿಳಿಸಿದರು.

    ರಾಜ್ಯದಲ್ಲಿ ಕೋಮುಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಯಿಕ್ರಿಯಿಸಿದ ಯದುವೀರ್ ಅವರು, ಎಲ್ಲರಿಗೂ ಕೈಮುಗಿದು ಬೇಡುತ್ತೇನೆ ಶಾಂತಿಯಿಂದ ಹೋಗಿ ಎಂದು ಮನವಿ ಮಾಡಿದರು.

    Verbattle
    Verbattle
    Verbattle
    #Mysore #Strike #yaduveer
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೆ ಬಂತು‌ ಹುಷಾರ್..
    Next Article ಶಾಸಕ ಯತ್ನಾಳರಿಗೆ ಪರಿಜ್ಞಾನವಿರಬೇಕಿತ್ತಂತೆ!
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • WilliamMoott ರಲ್ಲಿ Branded Shoe ಗಾಗಿ ಲಾರಿಯನ್ನೇ ಕದ್ದರು
    • WilliamMoott ರಲ್ಲಿ ರಾಜ್ಯದ ಬಿಜೆಪಿ ಒಂದು ಕುಟುಂಬದ ಮುಷ್ಟಿಯಲ್ಲಿದೆಯಂತೆ | BJP Karnataka
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.