ಬೆಂಗಳೂರು,ಜು.11-
ಬೆದರಿಕೆ ಹಾಗೂ ಸುಲಿಗೆಗೆ ಯತ್ನ ಪ್ರಕರಣದಲ್ಲಿ ಸಿಲುಕಿ ತಲೆ ಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತರನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್ ಆಗಿದ್ದ ಇವರು,ಹಲವರನ್ನು ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದಲ್ಲಿ ಸಿಲುಕಿದ್ದಾರೆ.
ಬೆಂಗಳೂರಿನ ಸ್ಪಾ ಒಂದರ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿದ ಆರೋಪದಲ್ಲಿ ಸಿಲುಕಿದ್ದರು.ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ಬಂಧಿಸಲು ಹುಡುಕಾಟ ನಡೆಸಿದ್ದರು.
ಇದರ ಬೆನ್ನಲ್ಲೇ ಅವರು ತಲೆಮರೆಸಿಕೊಂಡಿದ್ದರು. ಇವರಿಗಾಗಿ ಹುಡುಕಾಟ ನಡೆಸಿದ ಪೊಲೀಸರು ಇವರು ಕೇರಳದಲ್ಲಿ ತಲೆ ಮರೆಸಿಕೊಂಡಿರುವುದನ್ನ ಪತ್ತೆಹಚ್ಚಿ ಅಲ್ಲಿಂದ ಅವರನ್ನು ಬಂಧಿಸಿ ಪೊಲೀಸರು ಕರೆತಂದಿದ್ದಾರೆ
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ತಮಿಳುನಾಡಿನಿಂದ ಕೇರಳಕ್ಕೆ ಬಂದು ಮರೆಸಿಕೊಂಡಿದ್ದರು ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಬಂಧಿಸಿ ಠಾಣೆಗೆ ಕರೆತಂದು ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
‘ಸ್ಪಾ’ವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದರು. ರಾಜ್‌ನ್ಯೂಸ್ ಸುದ್ದಿವಾಹಿನಿ ಮಾಜಿ ಸಿಇಓ ವೆಂಕಟೇಶ್ ಹಾಗೂ ದಿವ್ಯಾ ವಸಂತ ಸಹೋದರ ಸಂದೇಶ್ ಬಂಧನವಾಗಿದ್ದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿತ್ತು. ವೆಂಕಟೇಶ್ ಹಾಗೂ ದಿವ್ಯಾ ಸೇರಿ ‘ಸ್ಪೈ ರೀಸರ್ಚ್ ಟೀಂ’ ಹೆಸರಿನ ವಾಟ್ಸಪ್ ಗ್ರೂಪ್ ಮಾಡಿಕೊಂಡು ದುಷ್ಕೃತ್ಯಗಳನ್ನು ನಡೆಸುತ್ತಿದ್ದರು.
ಪೊಲೀಸ್ ಬಲೆಗೆ ಬಿದ್ದ ಗಿಚ್ಚಿಗಿಲಿ ಸ್ಪರ್ಧಿ.
Previous Articleಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಖಚಿತ.
Next Article ಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.