Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    Trending

    ಪ್ರಜ್ವಲ್… ಎಲ್ಲಿದ್ದೀಯಪ್ಪಾ.!

    vartha chakraBy vartha chakraಮೇ 15, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.15:
    ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿಶೇಷ ತನಿಖಾ ತಂಡದ ಜೊತೆಗೆ ಕಣ್ಣಾ ಮುಚ್ಚಾಲೆ ಆಡುತ್ತಿದ್ದಾರೆ.
    ಪ್ರಕರಣ ಬೆಳಕಿಗೆ  ಬರುತ್ತಿದ್ದಂತೆ ವಿದೇಶ ಯಾತ್ರೆಗೆ ತೆರಳಿರುವ ಪ್ರಜ್ವಲ್ ರೇವಣ್ಣ ಅವರನ್ನು ಸ್ವದೇಶಕ್ಕೆ ಕರೆತರಲು ತಂಡ ಎಲ್ಲಾ ಪ್ರಯತ್ನ ನಡೆಸಿದ್ದು ಅದು ಇಲ್ಲಿಯವರೆಗೆ ಫಲ ನೀಡಿಲ್ಲ. ಪ್ರಜ್ವಲ್ ರೇವಣ್ಣ ಇಂದು ಬರುವರು ನಾಳೆ ಬರುವವರು ಎಂದು ಕಾಯುತ್ತಾ ಕುಳಿತಿದೆ.
     ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಎಲ್ ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನಿಗಾ ವಹಿಸಿದೆ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರ ಆಗಮನಕ್ಕಾಗಿ ಕಾದು ಕುಳಿತಿದೆ.
    ಈ ನಡುವೆ ಹಲವು ಬಾರಿ ಬೆಂಗಳೂರಿಗೆ ಬರಲು ಟಿಕೆಟ್ ಕಾಯ್ದಿರಿಸಿದ್ದ ಪ್ರಜ್ವಲ್ ರೇವಣ್ಣ ಅದನ್ನು ಕೊನೆಯ ಅವಧಿಯಲ್ಲಿ ರದ್ದುಪಡಿಸಿದ್ದಾರೆ ಅದರಂತೆ ಇಂದು ಕೂಡ ತಮ್ಮ ವಿಮಾನದ ಟಿಕೆಟ್ ಅನ್ನು ರದ್ದುಪಡಿಸಿದ್ದಾರೆ
    ಜರ್ಮನ್ ನ ಮ್ಯೂನಿಚ್ ನಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನ ಟಿಕೆಟ್  ರದ್ದುಗೊಳಿಸಲಾಗಿದೆ. ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ಈಗಾಗಲೇ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಲುಪ್ತಾನ್ಸಾ ವಿಮಾನದಲ್ಲಿ ಬುಕ್ ಆಗಿದ್ದ ಟಿಕೆಟ್ ಅನ್ನು ನಾಲ್ಕು ದಿನಗಳ ಹಿಂದೆಯೇ ರದ್ದು ಮಾಡಿಕೊಂಡಿರುವುದು ತಿಳಿದುಬಂದಿದೆ. ಆದರೆ, ಟಿಕೆಟ್ ರದ್ದು ಮಾಡಿದರೂ ಅದರ ಹಣ ವಾಪಸ್ ಪಡೆಯದೆ ಪ್ರಜ್ವಲ್ ಗೊಂದಲ ಮೂಡಿಸಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಮತ್ತೆ ಟಿಕೆಟ್ ಖರೀದಿಸಲು ಪ್ರಜ್ವಲ್ ಈ ತಂತ್ರ ಹೂಡಿರಬಹುದು ಎನ್ನಲಾಗಿದೆ.
    ಉಂಟಾ ಮೂಲಗಳ ಪ್ರಕಾರ ಲೋಕಸಭೆಯ ಚುನಾವಣೆ ಫಲಿತಾಂಶ ಹೊರ ಬೀಳುವವರೆಗೆ ಪ್ರಜ್ವಲ್ ಅವರು ಸ್ವದೇಶಕ್ಕೆ ಹಿಂದಿರುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ.
    ಸಂಪರ್ಕದಲ್ಲಿಲ್ಲ:
    ಈ ಎಲ್ಲ ಬೆಳವಣಿಗೆಗಳ ನಡುವೆ ಸಂಸದ ಪ್ರಜ್ವಲ್‌ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ ಎಂದು ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಕೇಳಿ ಬಂದ ಕೂಡಲೇ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಎಲ್ಲಿಗೆ ಹೋದರು? ಏಕೆ ಹೋದರು? ಯಾವಾಗ ಬರುತ್ತಾರೆ? ಎಂಬ ಮಾಹಿತಿ ಯಾರಿಗೂ ಇಲ್ಲ. ಅವರ ಮನೆಯವರಿಗೂ ಸರಿಯಾದ ಮಾಹಿತಿ ಇಲ್ಲವಂತೆ ಎಂದರು.
    ಅವರನ್ನು ಪತ್ತೆ ಹಚ್ಚಲು ಸರ್ಕಾರ ಬ್ಲೂ ಕಾರ್ನರ್‌ ನೋಟೀಸ್‌‍ ಕೊಟ್ಟಿದ್ದು, ಅವರನ್ನು ಪತ್ತೆ ಹಚ್ಚುವ ಕೆಲಸ ಸರ್ಕಾರ ಮಾಡುತ್ತಿದೆಯಾದರೂ ಅವರು ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಿದರು.
    ರೇವಣ್ಣ ಅವರು ಬಂಧನವಾಗಿದ್ದಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು,ನೋವು ವ್ಯಕ್ತಪಡಿಸಿದ್ದಾರೆ. ತಪ್ಪು ಮಾಡದಿದ್ದರೂ ರೇವಣ್ಣ ಅವರ ಬಂಧನವಾಗಿತ್ತು. ಈ ವಿಚಾರ ದೇವೇಗೌಡರಿಗೆ ಬಹಳ ನೋವುಂಟು ಮಾಡಿದೆ ಎಂದರು.
    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರೇವಣ್ಣ ಅವರ ಬಗ್ಗೆ ಅನುಕಂಪ ವ್ಯಕ್ತಪಡಿಸಿರುವುದು ಸಹಜ. ರಾಜಕೀಯವಾಗಿ ಒಬ್ಬರಿಗೊಬ್ಬರು ಮಾತನಾಡುವಾಗ ಟೀಕೆ, ಟಿಪ್ಪಣಿಗಳು ಸಾಮಾನ್ಯ.ರೇವಣ್ಣ ಅವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವಂತಾಯಿತಲ್ಲ ಎಂದು ಅವರ ಮನಸ್ಸಿನಲ್ಲೂ ನೋವಿರಬಹುದು. ಈ ವಿಚಾರ ರಾಜ್ಯದ ಜನತೆಗೂ, ರಾಜಕಾರಣಿಗಳಿಗೂ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೂ ಗೊತ್ತಿದೆ. ಎಸ್‌‍ಐಟಿ ಮೂಲಕ ರೇವಣ್ಣ ಅವರನ್ನು ಬಂಧಿಸಿದ್ದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ ಎಂದರು.
    ಜೈಲಿನಲ್ಲಿದ್ದಾಗ ರೇವಣ್ಣ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ದೇವರು ಯಾವ ದಾರಿ ತೋರುತ್ತಾರೋ ನೋಡೋಣ ಎಂದು ಹೇಳಿದ್ದರು. ಜೈಲಿನಿಂದ ಬಿಡುಗಡೆಯಾದ ನಂತರ ಅವರು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

    Verbattle
    Verbattle
    Verbattle
    #hdrevanna #prajwalrevanna Bangalore hdk Karnataka News Politics Trending Varthachakra ಚುನಾವಣೆ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!
    Next Article ಇವೆಂಟ್ ಮ್ಯಾನೇಜ್ಮೆಂಟ್ ಕೈ ನಲ್ಲಿದೆ ಸರ್ಕಾರ.
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    IPS ಅಧಿಕಾರಿ ತಲೆದಂಡ

    ಜನವರಿ 20, 2026

    3 ಪ್ರತಿಕ್ರಿಯೆಗಳು

    1. zfilm hd 713 on ಜನವರಿ 18, 2026 10:28 ಫೂರ್ವಾಹ್ನ

      кино онлайн новинки 2025 комедии чтобы поржать до слез

      Reply
    2. email rassylka 683 on ಜನವರಿ 18, 2026 10:52 ಫೂರ್ವಾಹ್ನ

      новый сервис рассылки сервис по созданию емейл рассылок

      Reply
    3. zadvizhka 30s41nzh 415 on ಜನವರಿ 18, 2026 10:57 ಫೂರ್ವಾಹ್ನ

      куплю задвижки 30с41нж задвижка стальная 30с41нж

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Daviddek ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • Georgemen ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.