ಬೆಂಗಳೂರು,ಮೇ .18-
ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕಾನೂನು ತನ್ನ ಕ್ರಮ ಜರುಗಿಸಲಿದೆ ಎಂದು ಹೇಳಿರುವ ಮಾಜಿ ಪ್ರಧಾನಿ ದೇವೇಗೌಡ ಈ ವಿಷಯ ಇಟ್ಟುಕೊಂಡು ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆದಿದೆ ಎಂದು ಆಪಾದಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು,ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಹೇಳಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ತಾವು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಜೂನ್ 4 ರ ನಂತರ ಈ ಕುರಿತಂತೆ ವಿವರವಾಗಿ ಮಾತನಾಡುತ್ತೇನೆ ಈಗ ಇದಕ್ಕೆ ಸಂಬಂಧಿಸಿದ ಕುಮಾರಸ್ವಾಮಿ ಎಲ್ಲವನ್ನೂ ವಿವರಿಸಿದ್ದಾರೆ ಎಂದು ತಿಳಿಸಿದರು.
ಮಾಜಿ ಸಚಿವ ಎಚ್.ರೇವಣ್ಣ ಅವರ ಮೇಲೆ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಆ ವಿಚಾರ ನ್ಯಾಯಾಲಯದ ಮುಂದೆ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು. ನಮ್ಮ ಕುಟುಂಬಕ್ಕೆ ಹಿನ್ನಡೆ ಮಾಡಲು ಈ ಪ್ರಕರಣದಲ್ಲಿ ಬಹಳ ಜನರಿರುವುದು ನಿಜ. ಆದರೆ ಅವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ.ಕುಮಾರಸ್ವಾಮಿಯವರು ಆರೋಪದ ಬಗ್ಗೆ ಏನು ಮಾಡಬೇಕೆಂಬುದನ್ನು ಈಗಾಗಲೇ ಹೇಳಿದ್ದಾರೆ ಎಂದರು.
ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಕುಮಾರಸ್ವಾಮಿಯವರು ಯಾವುದೇ ಚ್ಯುತಿಯಿಲ್ಲದ ರೀತಿಯಲ್ಲಿ ಸಂಬಂಧಪಟ್ಟವರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದರು.
ವಕೀಲ ದೇವರಾಜೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪ ಸೇರಿದಂತೆ ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ದೇವರಾಜೇಗೌಡ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ಕುಮಾರಸ್ವಾಮಿಯವರೇ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದರು
ಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?
Previous Articleರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಮನವಿ.
Next Article ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!