ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ
ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಸಿದ್ದರಾಮಯ್ಯ ಸವಾಲು
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ?
ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ?
ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ.
ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ಘನತೆವೆತ್ತ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು?

1 ಟಿಪ್ಪಣಿ
Your winning era begins the second you join – https://gpdifluca.com , The energy is electric and the wins are endless .