ಬೆಂಗಳೂರು,ಜ.1 :
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸಂಪುಟದ ಸಹೋದ್ಯೋಗಿ ಪ್ರಿಯಾಂಕ ಖರ್ಗೆ ಬೆಂಬಲಕ್ಕೆ ಮುಖ್ಯಮಂತ್ತಿ ಸಿದ್ದರಾಮಯ್ಯ ಧಾವಿಸಿದ್ದಾರೆ.
ಆತ್ಮಹತ್ಯೆ ಪ್ರಕರಣದಲ್ಲಿ ಮಂತ್ರಿ ಪ್ರಿಯಾಂಕ್ ಖರ್ಗೆಗೆ ಯಾವುದೇ ರೀತಿಯ ಸಂಬಂಧವಿಲ್ಲ ಹೀಗಾಗಿ
ಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ ಹೀಗಾಗಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಇಂತಹದೇ ಪ್ರಕರಣದಲ್ಲಿ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು ಹೀಗಾಗಿ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹೋರಾಟ ನಡೆಸಿತ್ತು ಎಂದು ತಿಳಿಸಿದರು.
ಸದ್ಯ ದಾಖಲಾಗಿರುವ ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಅದು ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ
ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ , ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.
Previous Articleಬೆಂಗಳೂರು ನಗರ ಪೊಲೀಸ್ ಆಯುಕ್ತರ ಮಾದರಿ ನಡೆ
Next Article ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಸಂದೇಶ


2 ಪ್ರತಿಕ್ರಿಯೆಗಳು
Монтаж зеленой кровли в Молодечно. Устройство гидроизоляции, дренажа, слоя грунта и высадка растений. Эко-подход, улучшение микроклимата и шумоизоляции. Эксклюзивные решения для частных и коммерческих объектов.
кровельные работы
Герметизация мансардного окна. Ошибки монтажа приводят к промерзанию и протечкам. Демонтируем откосы, проверяем монтажный оклад, устанавливаем по периметру гидро- и пароизоляционные фартуки. Обеспечиваем полную герметичность примыкания. krovlyamolodechno.ru