ಬೆಂಗಳೂರು, ಮೇ 22:
ನಮ್ಮ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿರುವವರ ಅಧಿಕಾರ ಅವಧಿಯಲ್ಲಿ ಯಾವ ರೀತಿ ಈ ಪ್ರಕರಣ ನಡೆದಿತ್ತು ಎಂದು ಎಲ್ಲರಿಗೂ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.
ಫೋನ್ ಕದ್ದಾಲಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, “ಅಶೋಕ್ ಅವರು ಕೂಡ ಗೃಹ ಸಚಿವರಾಗಿದ್ದವರು. ಈ ಆರೋಪ ಮಾಡುತ್ತಿರುವ ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿಗಳಾಗಿದ್ದವರು. ಈ ವಿಚಾರವಾಗಿ ಅವರು ಪತ್ರದ ಮೂಲಕ ದೂರು ನೀಡಲಿ. ಅವರ ಕಾಲದಲ್ಲಿ ಏನೆಲ್ಲಾ ಆಗಿತ್ತು ಎಂದು ಅವರಿಗೆ ಗೊತ್ತಿದೆ” ಎಂದು ತಿರುಗೇಟು ನೀಡಿದರು.
ಫೋನ್ ಕದ್ದಾಲಿಕೆ ವಿಚಾರವಾಗಿ ಸಿಎಂ, ಡಿಸಿಎಂ ಸುತ್ತಮುತ್ತಲಿನವರೇ ಮಾಹಿತಿ ನೀಡಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಯಾರೆಲ್ಲಾ ಮಾಹಿತಿ ನೀಡಿದ್ದಾರೆ ಒಂದು ಪಟ್ಟಿ ಮಾಡಿ ಅಫಿಡವಿಟ್ ಸಲ್ಲಿಸಲಿ” ಎಂದರು.
ಫೋನ್ ಕದ್ದಾಲಿಕೆ ಬಗ್ಗೆ ದೂರು ಸಲ್ಲಿಸಲು ಡಿಸಿಎಂ ಸೂಚನೆ.
Previous Articleಮಂತ್ರಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್.
Next Article ಮಲಗಿದಲ್ಲೇ ನಾಲ್ವರು ಚಿರನಿದ್ರೆಗೆ.