ಬೆಂಗಳೂರು: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶ ಸಮಸ್ಯೆಯಿಂದ ಕಿರುತೆರೆ ನಟಿ ಚೇತನಾ ರಾಜ್ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಸೋಮವಾರ ಚೇತನಾ ರಾಜ್ ಅವರು ಕೊನೆಯುಸಿರೆಳೆದಿದ್ದಾರೆ.
ಫ್ಯಾಟ್ ಸರ್ಜರಿ ಮಾಡುವಾಗ ಶ್ವಾಸಕೋಶದಲ್ಲಿ ನೀರಿನ ಅಂಶ ಸೇರಿಕೊಂಡು ಅವರು ಸಾವನ್ನಪ್ಪಿದ್ದಾರೆ.
ವೈದ್ಯರ ನಿರ್ಲಕ್ಷದಿಂದ ಚೇತನಾ ಮೃತಪಟ್ಟಿದ್ದಾರೆ ಎಂದು ತಾಯಿ ಮುನಿಲಕ್ಷ್ಮಿ ದೂರಿದ್ದಾರೆ. ಪೋಷಕರ ಒಪ್ಪಿಗೆ ಪಡೆಯದೆ ಸರ್ಜರಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
‘ಗೀತಾ’, ‘ದೊರೆಸಾನಿ’ ಧಾರಾವಾಹಿಗಳಲ್ಲಿ ಚೇತನಾ ರಾಜ್ ಅಭಿನಯಿಸಿದ್ದರು. ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Previous Articleಹೊಟ್ಟೆಪಾಡಿಗಾಗಿ 30 ವರ್ಷ ಗಂಡಸಿನಂತಿದ್ದ ಮಹಿಳೆ!
Next Article ಪಿ.ಚಿದಂಬರಂ ಮನೆ, ಕಚೇರಿ ಮೇಲೆ ಸಿಬಿಐ ದಾಳಿ