ಬೆಂಗಳೂರು: ಏರ್‌ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ 44 ವರ್ಷದ ಗೋವಿಂದಪ್ಪ ಎಂದು ಗುರುತಿಸಲಾಗಿದೆ.
ಎಡಬದಿಯಲ್ಲಿ ಹೋಗುತ್ತಿದ್ದ ಬೈಕ್ ಗೆ ಹಿಂದಿನಿಂದ ಬಂದ ಕಾರು ರಭಸವಾಗಿ ಗುದ್ದಿದ ಪರಿಣಾಮ ಫ್ಲೈ ಓವರ್ ಮೇಲಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ.
ಕೆಆರ್ ಪುರಂ ಬಳಿ ಕಾರು ಚಾಲಕ ವರುಣ್‌ನನ್ನು ಪೋಲೀಸರು ಬಂಧಿಸಿದ್ದಾರೆ.