ಪ್ರಕಾಶಂ(ಆಂಧ್ರಪ್ರದೇಶ),ನ.13- ಮುಖ್ಯಮಂತ್ರಿ ಚಂದ್ರಬಾಬುನಾಯ್ದು ಕುಟುಂಬದ ವಿರುದ್ಧ ಮಾನಹಾನಿಕಾರಕ ಟ್ವೀಟ್ ಮಾಡಿದ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಂಧನ ಭೀತಿ ಎದುರಿಸುತ್ತಿದ್ದಾರೆ.
ಮಾನಹಾನಿಕಾರಕ ಟ್ವೀಟ್ ಮಾಡಿದ ಸಂಬಂಧ ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಪಕ್ಷದ ಮುಖಂಡರೊಬ್ಬರು ಪ್ರಕಾಶಂ ಜಿಲ್ಲೆಯ ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಂದ್ರಬಾಬು ನಾಯ್ಡು, ಅವರ ಪುತ್ರ ಮತ್ತು ಸಚಿವ ನಾರಾ ಲೋಕೇಶ್ ಹಾಗೂ ಅವರ ಸೊಸೆಯ ವಿರುದ್ಧ ಮಾನಹಾನಿಕಾರಕ ಟ್ವೀಟ್ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಐಟಿ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ರಾಮ್ ಗೋಪಾಲ್ ವರ್ಮಾ ವರ್ಷಗಳಿಂದಲೂ ಚಂದ್ರಬಾಬು ನಾಯ್ಡು ವಿರುದ್ಧ ಕಿಡಿ ಕಾರುತ್ತಲೇ ಇದ್ದಾರೆ. ಅವರ ಬಗ್ಗೆ ಹಲವು ಬಾರಿ ಟ್ವೀಟ್ಗಳನ್ನು ಮಾಡಿದ್ದಾರೆ. ಕಾಲೆಳೆದಿದ್ದಾರೆ, ವ್ಯಂಗ್ಯ ಮಾಡಿದ್ದಾರೆ. ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿ ತೋರಿಸಿ ‘ವ್ಯೂಹಂ’ ಹೆಸರಿನ ಸಿನಿಮಾ ಸಹ ಮಾಡಿದ್ದಾರೆ. ರಾಮ್ ಗೋಪಾಲ್ ವರ್ಮಾ ಈ ಹಿಂದೆ ಚಂದ್ರಬಾಬು ನಾಯ್ಡು ಹಾಗೂ ಅವರ ಕುಟುಂಬದ ಬಗ್ಗೆ ಮಾಡಿರುವ ಟ್ವೀಟ್ಗಳನ್ನೆಲ್ಲ ಕಲೆ ಹಾಕಿರುವ ಟಿಡಿಪಿ ಮಂಡಲ್ ಪರಿಷತ್ ಕಾರ್ಯದರ್ಶಿ ರಾಮಲಿಂಗಾ ರೆಡ್ಡಿ ಇದೀಗ ವರ್ಮಾ ವಿರುದ್ಧ ದೂರು ದಾಖಲು ಮಾಡಿದ್ದಾರೆ.
ಕಳೆದ ಕೆಲ ದಿನಗಳಲ್ಲಿ, ಮಾನಹಾನಿಕಾರಕ ಪೋಸ್ಟ್ಗಳನ್ನು ಮಾಡಿದ್ದ ಕೆಲ ವೈಸಿಪಿ ನಾಯಕರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಕೇಸು ದಾಖಲಿಸಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿರುದ್ಧವೂ ದೂರು ದಾಖಲಾಗಿದ್ದು, ಅವರನ್ನೂ ಸಹ ಬಂಧಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

1 ಟಿಪ್ಪಣಿ
Your pulse races faster than the reels – http://calcitriolc.com/mostbet-casino-sk-2026-recenzia-a-skusenosti-z-praxe/ , One more round and gravity starts taking your orders .