ಬೆಂಗಳೂರು,ಜೂ.20:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಬೆನ್ನಲ್ಲೇ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಪ್ರಯಾಣ ದರ ಹೆಚ್ಚಳವಾಗಲಿದೆ ಎಂಬ ಸುದ್ದಿಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ
ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಪ್ರಸ್ತಾವ ಸದ್ಯ ಸರ್ಕಾರದ ಮುಂದೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನರೇಂದ್ರ ಮೋದಿ ಪ್ರಧಾನಿಯಾದಾಗ ತೈಲ ದರ ಎಷ್ಟಿತ್ತು? ಅವರು ಅಧಿಕಾರಕ್ಕೆ ಬಂದಾಗ ₹9.48 ಇದ್ದ ಹೆಚ್ಚುವರಿ ಅಬಕಾರಿ ಸುಂಕ ಈಗ ₹32.98ಕ್ಕೆ ಏರಿಕೆಯಾಗಿದೆ. ಹಾಗಾದರೆ ತೈಲ ದರ ಏರಿಸಿದ್ದು ಯಾರು? ಮನಮೋಹನ್ ಸಿಂಗ್ ಅಧಿಕಾರದಲ್ಲಿ ಇದ್ದಾಗ ಕಚ್ಚಾ ತೈಲ ದರ ಕಡಿಮೆ ಇತ್ತು. ಆದರೂ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇತ್ತು. ಈಗ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ, ಪೆಟ್ರೋಲ್-ಡೀಸೆಲ್ ದರ ಇಳಿಕೆ ಮಾಡುತ್ತಿಲ್ಲ’ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು
ಈ ವರ್ಷ ಗ್ಯಾರಂಟಿ ಯೋಜನೆಗಳಿಗೆ ₹ 60 ಸಾವಿರ ಕೋಟಿ ಬೇಕು. ಅದಕ್ಕೆ ಸಂಪನ್ಮೂಲ ಕ್ರೋಡೀಕರಿಸಬೇಕು. ಹಾಗೆಂದು ಗ್ಯಾರಂಟಿಗಾಗಿ ಹಣ ಹೊಂದಿಸುತ್ತಿಲ್ಲ. ರಾಜ್ಯದ ಅಭಿವೃದ್ಧಿಗೆ ಸಂಪನ್ಮೂಲ ಬೇಕು. ಗ್ಯಾರಂಟಿಗಳನ್ನು ಬಿಜೆಪಿಯವರು ವಿರೋಧಿಸುತ್ತಾರೆ. ಹಾಗಿದ್ದರೆ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಅವರು ಹೇಳಲಿ ನೋಡೋಣ’ ಎಂದು ಸವಾಲು ಹಾಕಿದರು.
ದೇವದಾರಿ ಗಣಿಗಾರಿಕೆಗೆ ಪರಿಸರ ಹೋರಾಟಗಾರರು ವಿರೋಧಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಗಣಿಗಾರಿಕೆಗೆ ಅನುಮತಿ ನೀಡಿದವರು ಕುಮಾರಸ್ವಾಮಿ. ಗಣಿಗಾರಿಕೆಗೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಹಿಂದೊಮ್ಮೆ ಅವರೇ ಗಣಿಗಾರಿಕೆ ವಿರೋಧಿಸಿದ್ದರು. ಇದಕ್ಕೆ ಅವರೇ ಉತ್ತರಿಸಬೇಕು’ ಎಂದರು.
Previous Articleಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
Next Article ದರ್ಶನ್ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ನಂಟು.