ಬೆಂಗಳೂರು.ಡಿ.31:
ಹೊಸ ವರ್ಷವನ್ನು ಸ್ವಾಗತಿಸಲು ಉದ್ಯಾನ ನಗರಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಅಮಲು ಪ್ರಿಯರ ಮನದಣಿಸಲು ಭಾರಿ ಪ್ರಮಾಣದ ಮಾದಕವಸ್ತು ಗಳು ನಗರಕ್ಕೆ ಹರಿದು ಬಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದೆ
ಈ ಮಾಹಿತಿಯನ್ನು ಆದರಿಸಿ ಕಾರ್ಯಾಚರಣೆ ನಡೆಸುತ್ತಿರುವ ಬೆಂಗಳೂರು ಪೊಲೀಸರು ಹಲವೆಡೆ ಮಾದಕ ವಸ್ತು ಸಂಗ್ರಹಿಸಿ ಇಟ್ಟುಕೊಂಡು ಮಾರಾಟಕ್ಕೆ ಪ್ರಯತ್ನ ನಡೆಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿ ಅಪಾರ ಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ಗಾಂಜಾವನ್ನು ಅಸ್ಸಾಂ, ಗೋವಾ, ತ್ರಿಪೂರ, ಓರಿಸ್ಸಾ, ಜಾರ್ಖಂಡ್, ಮಣಿಪುರ್ ಸೇರಿದಂತೆ ಇತರೆ ರಾಜ್ಯಗಳಿಂದ ನಗರಕ್ಕೆ ತರಿಸಿಕೊಂಡು ಮಾರಾಟ ಮಾಡುತ್ತಿದ್ದುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.
ನಿಷೇದಿತ ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿ 1.10 ಲಕ್ಷ ರೂ. ಮೌಲ್ಯದ 2 ಕೆ.ಜಿ 595 ಗ್ರಾಂ ಗಾಂಜಾ, 800 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು ಬಂಧಿಸಿ 6.25 ಲಕ್ಷರೂ. ಮೌಲ್ಯದ 15 ಕೆ.ಜಿ 630 ಗ್ರಾಂ ಗಾಂಜಾ, 3 ಮೊಬೈಲ್ ಫೋನ್, 1,200ರೂ. ನಗದು ಹಾಗೂ 1 ದ್ವಿ-ಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ನಿಷೇದಿತ ಮಾದಕವಸ್ತು ಮಾರಾಟ ಮಾಡುತ್ತಿದ್ದ ಒಬ್ಬನನ್ನು ರಾಜಗೋಪಾಲ್ ನಗರ ಠಾಣೆ ಪೊಲೀಸರು ಬಂಧಿಸಿ 1.10 ಲಕ್ಷ ರೂ. ಮೌಲ್ಯದ 5 ಕೆ.ಜಿ 450 ಗ್ರಾಂ ಗಾಂಜಾ ಹಾಗೂ 500 ರೂ. ನಗದು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬಸವೇಶ್ವರನಗರ ಠಾಣೆ ಪೊಲೀಸರು ವ್ಯಕ್ತಿ ಒಬ್ಬನನ್ನು ಬಂಧಿಸಿ 90 ಸಾವಿರ ಮೌಲ್ಯದ 1 ಕೆ.ಜಿ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಾದಕವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗೋಂದರಾಜನಗರ ಠಾಣೆ ಪೊಲೀಸರು ಬಂಧಿಸಿ 2.5 ಲಕ್ಷ ರೂ. ಮೌಲ್ಯದ 5 ಕೆ.ಜಿ 267 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಯೊಬ್ಬನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿ 70 ಸಾವಿರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕೃಷ್ಣರಾಜ ಮಾರುಕಟ್ಟೆ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ 75ಸಾವಿರ ಮೌಲ್ಯದ 1 ಕೆ.ಜಿ 450 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
Previous Articleಕಾಂಡೊಮ್ ಅತಿ ಹೆಚ್ಚು ಖರೀದಿಸಿದ್ದು ಯಾರು ಗೊತ್ತೇ.
Next Article ಪೊಲೀಸರ ವಿರುದ್ಧವೇ ಪೊಲೀಸರಿಗೆ ದೂರು.