ಬೆಂಗಳೂರು, ಜೂ.13:
ಮನುಕುಲವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾರಣಾಂತಿಕ ಎಚ್.ಐ.ವಿ.ವೈರಸ್ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಲಾಗಿತ್ತು.ಜನ ಸಾಮಾನ್ಯರಲ್ಲಿ ಈ ಬಗ್ಗೆ ಅರಿವು,ಮುಂಜಾಗ್ರತೆ ಹಾಗೂ ಆಧುನಿಕ ಚಿಕಿತ್ಸಾ ವಿಧಾನಗಳ ಪರಿಣಾಮವಾಗಿ ಈ ವೈರಸ್ ಹರಡುವ ಪ್ರಮಾಣದ ಕಡಿಮೆಯಾಗುತ್ತಾ ಸಾಗಿದೆ.
ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದರ ಪರಿಣಾಮ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತ ಸಾಗುತ್ತಿದೆ.
ಕರ್ನಾಟಕ ಏಡ್ಸ್ ನಿಯಂತ್ರಣ ಸಂಸ್ಥೆಯ ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಶೇ 15 ರಿಂದ 20 ರಷ್ಟು ಯುವಕರಲ್ಲಿಯೇ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದೆ.
ಅದರಲ್ಲಿಯೂ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನವರಲ್ಲಿಯೂ ಈಗ ಹೆಚ್ಚಾಗಿ ಎಚ್ಐವಿ ಕಂಡುಬರುತ್ತಿದೆ. ರಾಜ್ಯದಲ್ಲಿ ಬೆಂಗಳೂರು ಮಾತ್ರವಲ್ಲದೆ ಕೋಲಾರ ಬೆಳಗಾವಿ, ಧಾರವಾಡ, ತುಮಕೂರು ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅತಿಯಾದ ಮಾದಕ ವ್ಯಸನ ಹಾಗೂ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಹೆಚ್ಚಾಗಿ ಏಡ್ಸ್ ಕಾಣಿಸಿಕೊಳ್ಳುತ್ತಿದೆ.
ಎಚ್ಐವಿ ಸೋಂಕಿತರು ಅತಿ ಹೆಚ್ಚು ಬೆಂಗಳೂರು ನಗರದಲ್ಲಿಯೇ ಪತ್ತೆಯಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಅದರಲ್ಲೂ ಅವಿವಾಹಿತರಲ್ಲಿಯೇ ಎಚ್ಐವಿ ಸೋಂಕು ಹೆಚ್ಚಾಗುತ್ತಿದೆ. ಮದುವೆಗೂ ಮುನ್ನವೇ ಯುವಕರಲ್ಲಿ ಎಚ್ಐವಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ 1.85 ಲಕ್ಷ ಸೋಂಕಿತರಿದ್ದಾರೆ. ಇದರಲ್ಲಿ ನವವಿವಾಹಿತರೇ ಹೆಚ್ಚಿದ್ದಾರೆ.
ಬೆಂಗಳೂರು ಸೇರಿದಂತೆ ಹಲವು ಪ್ರದೇಶದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು ಎಚ್.ಐ.ವಿ.ಹೆಚ್ಚಳಕ್ಕೆ ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.ಡ್ರಗ್ಸ್ ವ್ಯಸನಿಗಳು ಸಿರಿಂಜ್ ಮೂಲಕ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವ ಪರಿಪಾಠ ಹೆಚ್ಚುತ್ತಿರುವುದರ ಜೊತೆಗೆ ಅಸುರಕ್ಷಿತವಲ್ಲದ ಲೈಂಗಿಕ ಸಂಪರ್ಕ ಕೂಡ ಇದಕ್ಕೆ ಕಾರಣ ಎನ್ನಲಾಗುತ್ತಿದೆ
ವಿಶ್ವಾದ್ಯಂತ ಸುಮಾರು 40 ದಶಲಕ್ಷಕ್ಕೂ ಅಧಿಕ ಜನ ಈ ಸೋಂಕು ಪೀಡಿತರಾಗಿದ್ದಾರೆ. ಸರ್ಕಾರವೂ ಇದರ ನಿಯಂತ್ರಣಕ್ಕೆ ಸತತ ಪ್ರಯತ್ನ ಮಾಡುತ್ತಲೇ ಇದೆ. ಆದರೆ ಜನರ ಜಾಗೃತಿ ಕೊರತೆ, ಏಡ್ಸ್ ಬಗ್ಗೆ ಕಡಿಮೆಯಾಗುತ್ತಿರುವ ಭಯ ಈಗ ಮತ್ತೆ ಯುವಕರಲ್ಲಿ ಏಡ್ಸ್ ಏರಿಕೆಗೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದ್ದಾರೆ HIV ಪೀಡಿತರು.!
Previous Articleಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.
Next Article ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆಯಂತೆ!