ಬೆಂಗಳೂರು,ಸೆ.5-ಸಿಲಿಕಾನ್ ಸಿಟಿ ಬೆಂಗಳೂರು ಜಾಗತಿಕವಾಗಿ ಪ್ರಮುಖ ವಿಮಾನಯಾನ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಅವರು ತಿಳಿಸಿದ್ದಾರೆ.
ನಗರದಲ್ಲಿ ವಿಮಾನಗಳ ನಿರ್ವಹಣೆ,ದುರಸ್ತಿ ಹಾಗೂ ಸಂಪೂರ್ಣ ನವೀಕರಣದ (ಎಂಆರ್‌ಒ) ಬೃಹತ್ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿ ದೇಶದ ವಿಮಾನಯಾನ ಕ್ಷೇತ್ರದಲ್ಲಿ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯವು ತನ್ನದೇ ಕೊಡುಗೆ ನೀಡಲಿದೆ ಎಂದರು.
ಜಾಗತಿಕ ಪ್ರಮುಖ ವಿಮಾನಯಾನ ಕೇಂದ್ರವಾಗಿ ಬೆಂಗಳೂರು ಹೊರಹೊಮ್ಮಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಎಂಆರ್‌ಒ ಬೃಹತ್ ಘಟಕ ನಿರ್ಮಾಣದಿಂದ
ವಿಮಾನಗಳ ನಿರ್ವಹಣೆಯಲ್ಲಿ ಸ್ವಾವಲಂಬನೆ
ದೇಶದಾದ್ಯಂತ ಪರಿಣತ ಎಂಜಿನಿಯರುಗಳಿಗೆ ಉದ್ಯೋಗ ಅವಕಾಶಗಳ ಸೃಷ್ಟಿಯಾಗಲಿದೆ ಎಂದರು.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 35 ಎಕರೆ ಭೂಪ್ರದೇಶದಲ್ಲಿ ಘಟಕವು ತಲೆ ಎತ್ತಲಿದ್ದು, ಏರ್‌ಇಂಡಿಯಾ ವಿಮಾನಗಳನ್ನು ಆಧುನೀಕರಿಸುತ್ತಿರುವುದರ ಜೊತೆಗೆ ತನ್ನ ಜಾಗತಿಕ ಕಾರ್ಯಾಚರಣೆ ವಿಸ್ತರಿಸುವ ಜೊತೆಗೆ ವಿಮಾನಗಳ ನಿರ್ವಹಣಾ ಸೇವೆಗಳಿಗೆ ಪ್ರಮುಖ ಕೇಂದ್ರವಾಗಿರಲಿದೆ.
ಎಂಆರ್‌ಒ ಬೃಹತ್ ಘಟಕ ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ರಾಜ್ಯ ಸರ್ಕಾರದ ಜೊತೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಎಸ್‌ಐಎ ಎಂಜಿನಿಯರಿಂಗ್ ಕಂಪನಿಯ ಜೊತೆಗೂ ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ ಲ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್ ಹಾಗೂ ಎಸ್‌ಐಎ ಎಂಜಿನಿಯರಿಂಗ್ ಕಂಪನಿಯ ಸಿಇಒ ಚಿನ್ ಯೌ ಸೆಂಗ್ ಸೇರಿ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
Previous Articleಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .
Next Article ಗೌರಿ ಹಬ್ಬಕ್ಕೆ ಶಿವಕುಮಾರ್ ಗಂಗೆ ಪೂಜೆ