ಬೆಂಗಳೂರು,ಸೆ.3-
ವಾಹನ ಸವಾರರೇ ಹುಷಾರ್..
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಂಚಾರ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ .
ಇವರು ಕೈಗೊಂಡ ಕ್ರಮಗಳಿಂದ ಕಳೆದ ಒಂದು ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ.
ಹೆದ್ದಾರಿಯುದ್ದಕ್ಕೂ ಅತ್ಯಾಧುನಿಕ ಕ್ಯಾಮರಾಗಳು, ಸೆನ್ಸರ್ಗಳನ್ನು ಅಳವಡಿಸಲಾಗಿದೆ. ಆದಾಗ್ಯೂ, ಕಳೆದ ಕೆಲವೇ ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ನಿಯಮ ಉಲ್ಲಂಘಿಸಿದ್ದಾರೆ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಗಂಟೆಗೆ 130 ಕಿಲೋಮೀಟರ್ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ವಾಹನ ಸೀಜ್ ಮಾಡಿ, ಲೈಸೆನ್ಸ್ ಕೂಡ ಅಮಾನತಿನಲ್ಲಿ ಇಡಲಾಗುತ್ತದೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಈವರೆಗೆ 193 ವಾಹನ ಮಾಲಿಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದೇವೆ. ಎರಡು ಲಕ್ಷಕ್ಕೂ ಅಧಿಕ ವಾಹನ ಸವಾರರು ನಿಯಮ ಮೀರಿದ್ದಾರೆ. ಐಟಿಎಮ್ಎಸ್ ಕ್ಯಾಮರಾದಿಂದ ವಾಹನಗಳ ಮೇಲೆ ನಿಗಾ ಇಡಲಾಗುತ್ತಿದೆ. 9 ರೀತಿಯ ನಿಮಯಗಳು ಇದರಲ್ಲಿ ಡಿಟೆಕ್ಟ್ ಆಗುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನೂರಕ್ಕಿಂತ ಹೆಚ್ಚು ವೇಗದಲ್ಲಿ ಹೋದರೆ ಐಟಿಎಮ್ಎಸ್ ಕ್ಯಾಮರಾ ಪತ್ತೆ ಮಾಡಿ ಮಾಹಿತಿ ಕಳುಹಿಸುತ್ತದೆ. ಅಂಥವರಿಗೆ ಫೈನ್ ಬೀಳಲಿದೆ. ಎಐ ಕ್ಯಾಮೆರಾ ಪೋಲ್ ಬಳಿ ಮಾತ್ರವಷ್ಟೇ ಅಲ್ಲ, ಕ್ಯಾಮೆರಾ ಇಲ್ಲದ ಜಾಗದಲ್ಲಿ ವೇಗವಾಗಿ ಹೋದರೂ ಗೊತ್ತಾಗುತ್ತದೆ. ಎರಡು ಕ್ಯಾಮರಾಗಳ ಮಧ್ಯೆ ಇಂತಿಷ್ಟೇ ವೇಗದ ಮಿತಿ ಹಾಗೂ ಸಮಯ ಫಿಕ್ಸ್ ಆಗಿರುತ್ತದೆ. ನೂರಕ್ಕಿಂತ ಹೆಚ್ಚು ವೇಗ ತೆರಳಿದರೆ, ಸಮಯಕ್ಕಿಂತ ಮುಂಚೆ ಕ್ಯಾಮರಾ ಪೋಲ್ ಬಂದ್ರೆ ದಂಡ ವಿಧಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

