ಮಂಗಳೂರು,ಮೇ.2:
ಕಡಲತೀರದ ಮಂಗಳೂರು ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಪಾಕಿಸ್ಥಾನದ ಪರ ಘೋಷಣೆ ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಡಿದು ಥಳಿಸಿ ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಹಿಂದೂಪರ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂಬುವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಹಾಗೂ ಶಶಾಂಕ್ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿ ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.
ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಅಸುನೀಗಿದ್ದ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗಾರರಿಗೆ ತಿಳಿಸಿದರು.
‘ದಾಳಿಯ ವೇಳೆ ಸುಹಾಸ್ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದಾನೆ. ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ’ ಎಂದು ತಿಳಿಸಿದರು.
ಪ್ರಕ್ಷುಬ್ಧ ವಾತಾವರಣ:
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮಂಗಳೂರು ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಪ್ರಕಾರ ಇದೇ 2ರ ಬೆಳಿಗ್ಗೆ 6 ರಿಂದ ಇದೇ 6 ರಂದು ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
Previous Articleನಮಾಜ್ ಮಾಡಿ ಸಸ್ಪೆಂಡ್ ಆದ.
Next Article ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ

1 ಟಿಪ್ಪಣಿ
Jogue no cassino que sabe como receber bem seus jogadores: Mostbet – https://mostbetpt.pro/pagamento/ , Entre agora no Mostbet e comece com 130% a mais + 290 rodadas de presente .