ಬೆಂಗಳೂರು: ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆಯ ವಿಮೆ ಯೋಜನೆಯಡಿ 2022-2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಡಿಕೆ,ಶುಂಠಿ ಹಾಗೂ ಹಸಿಮೆಣಸಿನಕಾಯಿ ಬೆಳೆಗಳನ್ನು ಅಧಿಸೂಚಿಸಲಾಗಿದೆ.
ವಿಮೆ ಕಂತು ತುಂಬಲು ಜೂನ್.30.ರ ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರತಿ ಹೆಕ್ಟೇರ್ ಅಡಿಕೆ ಬೆಳೆಗೆ ರೂ.6400, ಶುಂಠಿಗೆ ರೂ.6500, ಹಸಿಮೆಣಸಿನಕಾಯಿಗೆ ರೂ.3550 ವಿಮಾಹಣ ಪಾವತಿಸಬೇಕು.
ಬೆಳೆ ಸಾಲ ಪಡೆಯುವ ಮತ್ತು ಬೆಳೆಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಹಣಕಾಸು ಪ್ರಮಾಣದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಪ್ರಸ್ತುತ ಸಾಲು ಹಾಗು ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಲೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಬಹುದು.
ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಶೀದಿಯನ್ನು ಹಾಗು ಆಧಾರ್ ಸಂಖ್ಯೆ ನೀಡಬೇಕು.
ಆಸಕ್ತ ರೈತರು ವಾಣಿಜ್ಯ ಬ್ಯಾಂಕ್, ಪ್ರಾಂತೀಯ ಗ್ರಾಮೀಣ ಬ್ಯಾಂಕ್‍ಗಳು,ಸಾಮಾನ್ಯ ಸೇವಾ ಕೇಂದ್ರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ
Previous Articleಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಆಟಗಾರ ಉದಯ್ ಚೌಟ ನಿಧನ
Next Article ಗಗನಕ್ಕೇರುತ್ತಿರುವ ತರಕಾರಿ ಬೆಲೆಗಳು!