ಅಪೆಕ್ಸ್ ಬ್ಯಾಂಕ್ ನಿಂದ ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಪಡೆದಿರುವ ಸಾಲದಲ್ಲಿ 6 ಸಾವಿರ ಕೋಟಿಗೂ ಹೆಚ್ಚು ಬಾಕಿ ಉಳಿಸಿಕೊಂಡಿವೆ ಅವುಗಳಿಗೆ ಸಂಬಂಧಿಸಿದವರೆಲ್ಲರಿಗೂ ನೋಟಿಸ್ ಜಾರಿಗೊಳಿಸಿ ಬಾಕಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಲಕ್ಷ್ಮಿ ಹೆಬ್ಬಾಳ್ಕರ್ ಜೆಡಿಎಸ್‌ನ ಬಂಡೆಪ್ಪ ಕಾಂಶಪೂರ ಮೊದಲಾದವರು ಕೂಡ ಬಾಕಿ ಉಳಿಸಿಕೊಂಡಿದ್ದಾರೆ. ಜನ ಸಾಮಾನ್ಯರು 2 ಲಕ್ಷ ರೂಪಾಯಿ ಸಾಲಪಡೆದು ಕಟ್ಟದಿದ್ದಾಗಲೇ ಸಂಬಂಧಿಸಿದವರ ಮನೆಯನ್ನು ಜಪ್ತಿ ಮಾಡುವುದಿಲ್ಲವೇ? ಹಾಗೆಯೇ ನೂರಾರು ಕೋಟಿ ರೂಪಾಯಿ ಸಾಲ ಪಡೆದಿರುವವರ ವಿರುದ್ದ ಅಪೆಕ್ಸ್ ಬ್ಯಾಂಕ್‌ನವರು ಕ್ರಮ ಕೈಗೊಂಡಿದ್ದಾರೆ. ವಸೂಲಾತಿಗೆ ಇಲಾಖೆಯಿಂದಲೂ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
ಶಾಸಕ ರಮೇಶ ಜಾರಕಿಹೊಳಿ ಅವರ ಸೌಭಾಗ್ಯಲಕ್ಷಿ ಸಕ್ಕರೆ ಕಾರ್ಖಾನೆಯಿಂದ ಹಣ ಬಾಕಿ ಇದೆ.ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ. ಸಕ್ಕರೆ ಕಾರ್ಖಾನೆ ಇರುವ 24 ಜನರು ಸಾಲ ಪಡೆದಿದ್ದಾರೆ ಇದರಲ್ಲಿ ಸಾಲ ಪಾವತಿಸದೆ ಬಾಕಿ ಉಳಿಸಿಕೊಂಡವರೆಲ್ಲರಿಗೂ ನೋಟೀಸ್ ನೀಡಲಾಗಿದೆ ಎಂದರು.
ಕೆಲವರು ಬಡ್ಡಿ ಹಾಗು ಅಸಲು ಎರಡನ್ನೂ ಕಟ್ಟಿಲ್ಲ. ಕೆಲವರು ಬಡ್ಡಿಯನ್ನು ನಿಯಮಿತವಾಗಿ ಪಾವತಿಸುತ್ತಿದ್ದಾರೆ. ದಕ್ಷಿಣ ಕನ್ನಡ, ತುಮಕೂರು ಮೊದಲಾದ ಡಿಸಿಸಿ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದಾರೆ. ವಸೂಲಿ ಮಾಡಲು ಗಂಭೀರವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾರದು ಎಷ್ಟು ಕೋಟಿ ರೂಪಾಯಿ ಬಾಕಿ ಇದೆ ಎನ್ನುವುದನ್ನು ಕೂಡ ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು. ಇದರಲ್ಲಿ ರಾಜಕೀಯವೇನಿಲ್ಲ; ಮುಚ್ಚು ಮರೆಯೂ ಇಲ್ಲ ಎಂದು ಪ್ರತಿಕ್ರಿಯಿಸಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
