Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಟ್ಕಳ ಉಗ್ರರಿಗೆ ಜೈಲು ಶಿಕ್ಷೆ.
    ಅಂತಾರಾಷ್ಟ್ರೀಯ

    ಭಟ್ಕಳ ಉಗ್ರರಿಗೆ ಜೈಲು ಶಿಕ್ಷೆ.

    vartha chakraBy vartha chakraಡಿಸೆಂಬರ್ 25, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.25-
    ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭಾರತ ಭೇಟಿ ವೇಳೆ ಬಾಂಬ್ ಸ್ಫೋಟಕ್ಕೆ ಸಂಚು ಹೂಡಿದ್ದ ಭಟ್ಕಳ ಮೂಲದ ಮೂವರು ಇಂಡಿಯನ್ ಮುಜಾಹಿದ್ದೀನ್ ಉಗ್ರರಿಗೆ ರಾಷ್ಟ್ರೀಯ ತನಿಖಾ ದಳ ವಿಶೇಷ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
    ಕಳೆದ 2015ರಲ್ಲಿಗಣರಾಜ್ಯೋತ್ಸವ ಸಮಾರಂಭದ ಅತಿಥಿಯಾಗಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭ ಸ್ಫೋಟ ನಡೆಸಲು ಸಂಚು ಹೂಡಿದ್ದ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿತ್ತು.
    ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನಂತರ
    ದೋಷಿ ಎಂದು ಕೆಲ ದಿನಗಳ ಹಿಂದಷ್ಟೇ ಕೋರ್ಟ್ ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿದ್ದು ಅಪರಾಧಿಗಳಿಗೆ ಸಾದಾ ಜೈಲು ಶಿಕ್ಷೆ ವಿಧಿಸಿದೆ.
    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಅಫಾಕ್‌, ಸಬೂರ್ ಮತ್ತು ಹುಸೇನ್‌ ಎಂಬ ಮೂವರು ಅಪರಾಧಿಗಳು ಪಾಕಿಸ್ತಾನದ ಆಣತಿಯಂತೆ ದುಷ್ಕೃತ್ಯಕ್ಕೆ ಸಂಚು ಹೂಡಿದ್ದರು‌ ಎಂದು ತನಿಖಾ ತಂಡ ಆರೋಪ ಸಾಬೀತು ಪಡಿಸಿತ್ತು.ಈ ಹಿನ್ನೆಲೆಯಲ್ಲಿ ಎನ್ಐಎ ವಿಶೇಷ ನ್ಯಾಯಾಲಯವು ಅಫಾಕ್‌ಗೆ 1.55 ಲಕ್ಷ ರೂಪಾಯಿ, ಸಬೂರ್ ಮತ್ತು ಹುಸೇನ್‌ಗೆ ತಲಾ 95,000 ರೂಪಾಯಿ ದಂಡ ವಿಧಿಸಿದೆ.
    ಮೂವರೂ ಅಪರಾಧಿಗಳಿಗೆ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೂವರಿಗೆ ಶಿಕ್ಷೆ ವಿಧಿಸಲಾಗಿದೆ.
    2015ರಲ್ಲಿ ನಗರದ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಸಿಬಿ ಎಸಿಪಿ ತಮ್ಮಯ್ಯ ಅವರು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
    ಇದೇ ಪ್ರಕರಣದಲ್ಲಿ ಭಟ್ಕಳದ ರಿಯಾಜ್ ಅಹಮದ್ ಸಯೀದಿ ಮತ್ತು ಜೈನುಲ್ಲಾಬುದ್ದೀನ್ ಅವರನ್ನು ಖುಲಾಸೆಗೊಳಿಸಲಾಗಿತ್ತು. ಪ್ರಕರಣದ ಇತರ ಆರೋಪಿಗಳಾದ ರಿಯಾಜ್ ಭಟ್ಕಳ್, ಇಕ್ಬಾಲ್ ಭಟ್ಕಳ್, ಅಲಿಫ್ ಮತ್ತು ಸಮೀರ್ ತಲೆಮರೆಸಿಕೊಂಡಿದ್ದಾರೆ.
    ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ, ಉಗ್ರರು ಸ್ಫೋಟಕಗಳನ್ನು ಸಂಗ್ರಹಿಸುತ್ತಿರುವುದು ತಿಳಿದುಬಂದಿತ್ತು. ನಂತರ ಉಗ್ರರನ್ನು ಬಂಧಿಸಿದ ಪೊಲೀಸರು ಡಿಟೋನೇಟರ್‌ಗಳು, ಜಿಲೆಟಿನ್ ಸ್ಟಿಕ್‌ಗಳು, ಪೈಪ್ ಬಾಂಬ್‌ಗಳು, ಸ್ಫೋಟಕ ವಸ್ತುಗಳು, ಸರ್ಕ್ಯೂಟ್ ಬೋರ್ಡ್‌ಗಳು, ಟೈಮರ್‌ಗಳು, ಗನ್‌ಪೌಡರ್ ಮತ್ತು ಬಾಂಬ್‌ಗಳಲ್ಲಿ ಬಳಸಲಾದ ಇತರ ವಸ್ತುಗಳು ಮತ್ತು ಯುಎಇಯ ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದರು.ಈ ವೇಳೆ ಸಂಚಿನ ಸಂಗತಿ ಬೆಳಕಿಗೆ ಬಂದಿತ್ತು.

    Verbattle
    Verbattle
    Verbattle
    ಉಗ್ರ ಎನ್ಐಎ ಕಾನೂನು ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸಿ.ಟಿ.ರವಿ ಪ್ರಕರಣ: ಪೊಲೀಸ್ ಅಧಿಕಾರಿ ಸಸ್ಪೆಂಡ್.
    Next Article ಮುನಿರತ್ನ ಮೇಲೆ ಮೊಟ್ಟೆ ದಾಳಿ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. Vhsvhs on ಫೆಬ್ರವರಿ 11, 2026 11:32 ಅಪರಾಹ್ನ

      mgm grand sports betting https://betmgm-play.com/ bet 10 get 200

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • LinwoodGah ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • LarryCax ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.