ಹೈದರಾಬಾದ್. ಫೆ.5-
ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ(NIA) ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮೂವರು ಉಗ್ರರಿಂದ ಹ್ಯಾಂಡ್ ಗ್ರೆನೇಡ್ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಂಡು ತೀವ್ರ ವಿಚಾರಣೆ ನಡೆಸಲಾಗಿದೆ.
ನಗರದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರರ ಮೇಲೆ ಯುಎಪಿಎ (UAPA) ಕಾಯ್ದೆಯಡಿ ಎಫ್ಐಆರ್ ಎನ್ಐಎ ಎಫ್ಐಆರ್ ದಾಖಲಿಸಲಾಗಿದೆ. ಕಳೆದ 2005 ರಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಜಾಹೆದ್ ನನ್ನು ಈ ಹಿಂದೆ ಬಂಧಿಸಲಾಗಿತ್ತು ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2017 ರಲ್ಲಿ ಬಿಡುಗಡೆ ಮಾಡಲಾಗಿತ್ತು.
ಅಬ್ದುಲ್ ಜಾಹೀದ್ ತನ್ನ ಗ್ಯಾಂಗ್ ಸದಸ್ಯರೊಂದಿಗೆ ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಸೂಚನೆಗಳ ಆಧಾರದ ಮೇಲೆ ಹೈದರಾಬಾದ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸಂಚು ರೂಪಿಸಿದ್ದ. ಆರೋಪಿಗಳ ಮೇಲೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಾಹೀದ್ ಇದ್ದ ಸ್ಥಳದಲ್ಲಿ ಪತ್ತೆಯಾದ ಎರಡು ಗ್ರೆನೇಡ್, ಎರಡು ಮೊಬೈಲ್ ಫೋನ್ ಮತ್ತು 3,91,800 ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.