ಬೆಂಗಳೂರು,ಮೇ.23-ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆ ಅಪಹರಣ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ದ ಅಧಿಕಾರಿಗಳು ಭವಾನಿ ರೇವಣ್ಣಗೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ. ಇನ್ನೊಂದೆಡೆ ಭವಾನಿ ಅವರ ಕಾರು ಚಾಲಕ ಕೂಡ ನಾಪತ್ತೆಯಾಗಿದ್ದಾರೆ.
ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಎಸ್‍ಐಟಿ ಅಧಿಕಾರಿಗಳು ವಿಚಾರಣೆಗೆ ಎರಡು ಬಾರಿ ನೋಟಿಸ್ ನೀಡಿದರೂ ಕೂಡ ಭವಾನಿ ರೇವಣ್ಣ ವಿಚಾರಣೆಗೆ ಬಂದಿಲ್ಲ ಅಲ್ಲದೇ ಎಸ್ ಐಟಿಯ ಸಂಪರ್ಕಕ್ಕೂ ಸಿಕ್ಕಿಲ್ಲ.
ಅನಾರೋಗ್ಯದ ನೆಪದಿಂದ ಇದೂವರೆಗೂ ವಿಚಾರಣೆಗೆ ಹಾಜರಾಗಿಯೇ ಇಲ್ಲ. ಆದರೆ ಭವಾನಿ ಎಲ್ಲಿದ್ದಾರೆ…? ಭವಾನಿ ಯಾವಾಗ ವಿಚಾರಣೆಗೆ ಬರಲಿದ್ದಾರೆ ಎಂದು ಕಾಯುವ ಸ್ಥಿತಿ ಎಸ್ ಐಟಿ ಅಧಿಕಾರಿಗಳದ್ದಾಗಿದೆ.
ಭವಾನಿ ಚಾಲಕ ನಾಪತ್ತೆ:
ಇತ್ತ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಕೂಡ ನಾಪತ್ತೆಯಾಗಿದ್ದಾನೆ.ಆತನಿಗೆ ಎಸ್‍ಐಟಿ ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದರೂ ಕೂಡ ವಿಚಾರಣೆಗೆ ಬಂದಿಲ್ಲ.
ಎಸ್‍ಐಟಿ ಪೊಲೀಸರು ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದಾರೆ. ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಎನ್ನುವ ಮಾಹಿತಿಯ ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನದಂದು ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿರುವುದು ಅಜಿತ್ ಎನ್ನುವ ಮಾಹಿತಿಯಿದೆ. ಹೀಗಾಗಿಯೇ ಅಜಿತ್ ನನ್ನು ಎಸ್‍ಐಟಿಯವರು ಹುಡುಕಾಟ ನಡೆಸಿದ್ದಾರೆ.
Previous Articleಮಲಗಿದಲ್ಲೇ ನಾಲ್ವರು ಚಿರನಿದ್ರೆಗೆ.
Next Article ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಪ್ರಕ್ರಿಯೆ.

