ಬೆಂಗಳೂರು
ರಾಜ್ಯದ ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು ಸದ್ಯದಲ್ಲೇ ಅವರು ಆಸ್ಪತ್ರೆಯಿಂದ ಮನೆಗೆ ಮರಳಲಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆ ಮತ್ತು ಬಳಲಿಕೆಯಿಂದ ನರಳುತ್ತಿದ್ದ ಎಸ್ಎಂ ಕೃಷ್ಣ ಅವರನ್ನು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಕೆಲವು ದಿನಗಳ ಕಾಲ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗಿತ್ತು ಆಸ್ಪತ್ರೆಯಲ್ಲಿ ವೈದ್ಯರು ನೀಡಿದ ಚಿಕಿತ್ಸೆಗೆ ತ್ವರಿತಗತಿಯಲ್ಲಿ ಸ್ಪಂದಿಸಿದ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಇದೀಗ ಮನೆಗೆ ಮರಳುವಷ್ಟು ಸುಧಾರಿಸಿದ್ದಾರೆ.
ಇದೀಗ ಅವರನ್ನು ಮನೆಗೆ ಕರೆದುಕೊಂಡು ಹೋಗಲು ವೈದ್ಯರು ಸಮ್ಮತಿಸಿದ್ದು ಸದ್ಯದಲ್ಲೇ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಸ್ವಗೃಹಕ್ಕೆ ಹಿಂತಿರುಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
91 ವರ್ಷ ವಯಸ್ಸಿನ ಎಸ್ಎಂ ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿ ಆಗಿ ಕೇಂದ್ರ ಮಂತ್ರಿ ಆಗಿ ಮಹಾರಾಷ್ಟ್ರ ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದು ವಯೋಸಹಜ ಕಾರಣದ ಹಿನ್ನೆಲೆಯಲ್ಲಿ ಅವರು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದರು
Previous Articleಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ.
Next Article ದರ್ಶನ್ ಗೆ ಜೈಲಿನಲ್ಲಿ ಬಿರಿಯಾನಿ ಊಟ.