ಬೆಂಗಳೂರು.ನ,13:
ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹಾರಾಷ್ಟ್ರ ಚುನಾವಣೆಯತ್ತ ಗಮನ ಕೇಂದ್ರೀಕರಿಸಿದ್ದಾರೆ.
ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ ನಾಯಕರ ಕೋರಿಕೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 15 ರಿಂದ ವಿದರ್ಭ ಭಾಗದಲ್ಲಿ ಚುನಾವಣೆಯ ಪ್ರಚಾರದಲ್ಲಿ ತೊಡಗಲಿದ್ದರೆ ಉಪ ಮುಖ್ಯಮಂತ್ರಿ ಶಿವಕುಮಾರ್ ರಾಜಕೀಯ ತಂತ್ರಗಾರಿಕೆ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ವಸತಿ ಸಚಿವ ಈ ಜಮೀರ್ ಅಹ್ಮದ್ ಖಾನ್ ಜಲ ಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೊಲ್ಲಾಪುರ, ಲಾತೂರ್, ಕೊಲ್ಲಾಪುರ ಪುಣೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ ಈ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಸಮುದಾಯಕ್ಕೆ ಸೇರಿದ ಧನಗರ್ ಸಮುದಾಯದ ಮತದಾರರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ ಹಾಗೆಯೇ ಕನ್ನಡ ಭಾಷಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅವರ ಒಲವು ಬಿಟ್ಟಿತುಕೊಳ್ಳಲು ಅಘಾಡಿ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ.
ಜಮೀರ್ ಅಹಮದ್ ಖಾನ್ ಅಲ್ಪಸಂಖ್ಯಾತ ಸಮುದಾಯದಲ್ಲಿ ಅತ್ಯಂತ ಪ್ರಭಾವಿಯಾಗಿದ್ದರೆ ಎಂಬಿ ಪಾಟೀಲ್ ಅವರು ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾಗಿದ್ದು ಇವರ ಮೂಲಕ ಮತಗಳನ್ನು ಸೆಳೆಯಲು ಕಾರ್ಯತಂತ್ರ ಹೆಣೆಯಲಾಗಿದೆ.
ಅದೇ ರೀತಿಯಲ್ಲಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಮಹಾರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪರಿಚಿತರಾಗಿದ್ದು ಮುಂಬೈನಲ್ಲಿಯೇ ಒಂದೆರಡು ದಿನ ವಾಸ್ತವ್ಯ ಹೂಡಲಿರುವ ಅವರು ಕಾಂಗ್ರೆಸ್ ಮತ್ತು ಎನ್ ಸಿ ಪಿ ನಾಯಕರ ಜೊತೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.
Previous Articleಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
Next Article ಬೆಂಗಳೂರಿನ ಈ ರಸ್ತೆಯಲ್ಲಿ ಎರಡು ತಿಂಗಳು ವಾಹನ ಸಂಚಾರ ಇಲ್ಲ.