Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    Trending

    ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.

    vartha chakraBy vartha chakraಮೇ 14, 202489 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14:
    ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ಮಹಾರಾಷ್ಟ್ರದ ಮೈತ್ರಿ ಸರ್ಕಾರ ಪತನ ಹೊಂದುವುದು ನಿಶ್ಚಿತ. ಆ ರಾಜ್ಯದ ಮುಖ್ಯಮಂತ್ರಿ ಏಕನಾಥ ಶಿಂದೆ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವ ಕಡೆ ಗಮನಹರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ನಮ್ಮಲ್ಲಿ ಯಾವುದೇ ಜಗಳವಿಲ್ಲ. ಒಳಗೂ ಇಲ್ಲ; ಹೊರಗೂ ಇಲ್ಲ. ಜಗಳ ಇದ್ದರೆ ತಾನೆ ಸರ್ಕಾರ ಬೀಳುವುದು. ನಮ್ಮಲ್ಲಿ ಜಗಳವಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿತ್ತಾ?’ ಎಂದು ಕೇಳಿದರು.
    ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆ ನಡೆಯಲಿದೆ ಎಂದು ಏಕನಾಥ ಶಿಂದೆ ಹೇಳಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದರು.
    ಇದಾದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂದಿದ್ದಾರೆ
    ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ
    ಬಿಜೆಪಿ ನಾಯಕರು ನಮ್ಮ (ಕಾಂಗ್ರೆಸ್) ಸರ್ಕಾರದ ಚಿಂತೆ ಮಾಡುವುದನ್ನು ಬಿಟ್ಟು ತಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಲಿ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲರು ಸೇಡಿಗಾಗಿ ತಹತಹಿಸುತ್ತಿದ್ದಾರೆ. ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ತಿಳಿಸಿದ್ದಾರೆ
    ರಾಜ್ಯದ ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ’ ಎಂದು ಹೇಳಿದ್ದಾರೆ.
    ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು  ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್‌ಎಸ್‌ಎಸ್‌ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ ಎಂದಿದ್ದಾರೆ .
    ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಅವರು ಹೇಳಿದ್ದಾರೆ.

    Verbattle
    Verbattle
    Verbattle
    #maharashtra #siddaramaiah Eknath Shinde Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭಾ ಚುನಾವಣೆಯಲ್ಲಿ ಯಾರು ಗೆದ್ದರೆ ಏನಾಗುತ್ತೆ ಗೊತ್ತಾ..
    Next Article ರೇವಣ್ಣ ಬಂಧನದ ಹಿಂದೆ ಇದೆಯಂತೆ ತಿಮಿಂಗಿಲ.
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • 1win_pfSi ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Glennhof ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.