ಮಂಡ್ಯ : ಕನ್ನಡದ ಜನಪ್ರಿಯ ದಾರಾವಾಹಿ ಮಹಾನಾಯಕದ ಬಾಲನಟ ಡಾ.ಬಿ.ಆರ್.ಅಂಬೇಡ್ಕರ್ ಅವರ ಪಾತ್ರಧಾರಿ ಆಯುಧ್ ಬನಸಾಲಿ ಅವರು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾಲಗಾರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಡಾ. ಬಿ.ಆರ್.ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಗ್ರಾಮಕ್ಕೆ ಭೇಟಿ ನೀಡಿದ ಅವರು
ಚನ್ನಪಟ್ಟಣದಲ್ಲಿ ನಡೆಯುತ್ತಿರುವ ಬೃಹತ್ ಡಾ.ಬಿ.ಆರ್.ಅಂಬೇಡ್ಕರ್ ಹಬ್ಬಕ್ಕೆ ಆಗಮಿಸಿದ್ದಾರೆ. ಈ ವೇಳೆ ಮಹಾನಾಯಕ ಧಾರಾವಾಹಿ ಬಾಲನಟನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ನೀಡಲಾಗಿದೆ.
ಸುರೇಶ್ ಕಂಠಿ ನಿವಾಸಕ್ಕೆ ಭೇಟಿ ನೀಡಿದ ಬಾಲ ನಟ ಆಯುಧ್ ಬನಸಾಲಿ ಅವರು ಜೈ ಭೀಮ್ ಘೋಷಣೆ ಕೂಗಿದ್ದಾರೆ.
ಸುರೇಶ್ ಕಂಠಿ, ಮಾಜಿ ಜಿ.ಪಂ.ಅಧ್ಯಕ್ಷ, ಹಾಗು ಕಾಂಗ್ರೆಸ್ ಎಸ್ಸಿ ಮೋರ್ಚಾ ಅಧ್ಯಕ್ಷರಾಗಿದ್ದು, ಬಾಲನಟ ಆಯುಧ್ ಬನಸಾಲಿಯನ್ನ ಸುರೇಶ್ ಕಂಠಿ ಅಭಿನಂದಿಸಿದ್ದಾರೆ.
ಮಹಾನಾಯಕ ಧಾರಾವಾಹಿಯಲ್ಲಿ ಅಂಬೇಡ್ಕರ್ ಪಾತ್ರದಲ್ಲಿ ನಟಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಬಾಲ ನಟ ಆಯುಧ್ ಬನಸಾಲಿ ಹೇಳಿದ್ದಾರೆ.