ಉತ್ತರ ಕನ್ನಡ,ಮೇ.21- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಹೆಗ್ಗೋಡ್ಮನೆಯಲ್ಲಿ ನಡೆದಿದೆ.
ಹೆಗ್ಗೋಡ್ಮನೆಯ ಮಂಜುಳಾ ಚನ್ನಯ್ಯ (46) ಕೊಲೆಯಾದವರು.ಸಿದ್ದಾಪುರದಲ್ಲಿ ಹೆಂಡತಿಯನ್ನೇ ಕೊಲೆ ಮಾಡಿದ ಮೃತಳ ಗಂಡ ಮಂಜುನಾಥ ಚನ್ನಯ್ಯ ಮತ್ತು ಮಂಜುಳಾ ನಡುವೆ ಆಗಾಗ ಜಗಳವಾಗುತ್ತಿತ್ತು. ಇದರಿಂದ ಕೋಪಗೊಂಡ ಮಂಜುನಾಥ ತನ್ನ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಹೆದರಿ ಪರಾರಿಯಾಗಿದ್ದಾನೆ.
ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ವಶಕ್ಕೆ ಪಡೆದ ಸಿದ್ದಾಪುರ
ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಮಂಜುನಾಥನಿಗಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.
Previous Article1,526 ಕೋಟಿ ಮೌಲ್ಯದ ಹೆರಾಯಿನ್ ವಶ
Next Article ಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಆಟಗಾರ ಉದಯ್ ಚೌಟ ನಿಧನ