ಬೆಂಗಳೂರು,ಫೆ.19:
ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಪ್ರಕರಣ ತನಿಖೆಗೆ ಯೋಗ್ಯವಲ್ಲ ಎಂದು ಲೋಕಾಯುಕ್ತ ನಿರ್ಧಾರಕ್ಕೆ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬೀರಿ ತಮ್ಮ ಪತ್ನಿ ಬಿಎಮ್ ಪಾರ್ವತಿ ಅವರಿಗೆ ಪರ್ಯಾಯ ನಿವೇಶನ ದೊರಕಿಸಿ ಕೊಡುವಂತೆ ಮಾಡಿದ್ದಾರೆ ಎಂದು ಆರೋಪಿಸಿದ ಪ್ರಕರಣಕ್ಕೆ ಯಾವುದೇ ರೀತಿಯ ಸಾಕ್ಷಿಗಳು ಇಲ್ಲ ಎಂದು ಹೇಳಿದೆ.
ಪ್ರಕರಣದ ತನಿಕ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಲು ಸಿದ್ಧತೆ ನಡೆಸಿರುವ ಲೋಕಾಯುಕ್ತ ಈ ಪ್ರಕರಣ ಸಂಪೂರ್ಣ ಸಿವಿಲ್ ಸ್ವರೂಪದ್ದಾಗಿದ್ದು ಲೋಕಾಯುಕ್ತ ತನಿಖೆಗೆ ಯೋಗ್ಯವಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಕೋರ್ಟ್ ಗೆ ತನಿಖಾ ವರದಿ ವರದಿ ಸಲ್ಲಿಸಲು ಮುಂದಾಗಿರುವ ಲೋಕಾಯುಕ್ತ ಇದಕ್ಕೂ ಮುನ್ನ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದೆ.
ಲೋಕಾಯುಕ್ತ ಎಸ್ಪಿ ಉದೇಶ್ ಹೆಸರಿನಲ್ಲಿ ಸ್ನೇಹ ಮಯಿ ಕೃಷ್ಣ ಅವರಿಗೆ ನೀಡಲಾಗಿರುವ ನೋಟಿಸ್ ನಲ್ಲಿ ನೀವು ನೀಡಿದ ದೂರಿನ ಸಂಬಂಧ A1 ಆರೋಪಿಯಿಂದ A 4 ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ.
ಇದರ ನಂತರ ಈ ಆರೋಪ ಇದು ಸಿವಿಲ್ ಸ್ವರೂಪ್ಪದ್ದಾಗಿದ್ದು ಕ್ರಿಮಿನಲ್ ಮೊಕದ್ದಮೆಯಂತೆ ತನಿಖೆ ನಡೆಸಲು ತಕ್ಕುದಲ್ಲ, ಆರೋಪ ಕಾನೂನಿನ ತಪ್ಪು ತಿಳುವಳಿಕೆಯಿಂದ ಕೂಡಿದೆ. ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಸಾಕಷ್ಟು ಸಾಕ್ಷ್ಯಾಧಾರ ಗಳ ಕೊರೆತೆ ಇದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ತಾವು ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ಆದೇಶದ ಅನ್ವಯ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಇದಕ್ಕೆ ವಿರೋಧವಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ನ್ಯಾಯಾಧೀಶರಿಗೆ ತಿಳಿಸಿ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
Previous Articleಅಭಿಮಾನಿಗಳಿಗೆ ದಾಸನ ಭಾವುಕ ಪತ್ರ
Next Article ಅನ್ನಭಾಗ್ಯ ಕಾರ್ಡ್ ಗೆ ದುಡ್ಡು ಕೊಡುವುದಿಲ್ಲ