ಹೈದರಾಬಾದ್, ಮೇ.21- ಕುಟುಂಬದವರ ವಿರೋಧದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಕ್ಕಾಗಿ ಪತ್ನಿಯ ಎದುರೇ ದಲಿತ ಸಮುದಾಯದ ಯುವಕ ನಾಗರಾಜ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಮುತ್ತಿನ ನಗರಿಯಲ್ಲಿ ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ನಗರದ ಬೇಗುಂ ಬಜಾರ್ನಲ್ಲಿ ಐದು ಮಂದಿಯ ಗ್ಯಾಂಗ್ ಯುವಕನನ್ನು ನಡುರಸ್ತೆಯಲ್ಲೇ ನಿನ್ನೆ ರಾತ್ರಿ 7.30ರ ವೇಳೆ
ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ.
ಮೃತ ಯುವಕನನ್ನು ನೀರಜ್ ಪನ್ವಾರ್ (21) ಎಂದು ಗುರುತಿಸಲಾಗಿದೆ. ಈತ ಬೇರೊಂದು ಜಾತಿಯ ಯುವತಿಯನ್ನು ಮದುವೆ ಆಗಿದ್ದ. ಇಬ್ಬರ ಮದುವೆ ಯುವತಿ ಮನೆಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯೂ ಮದುವೆಯಾಗಿದ್ದರು. ದಂಪತಿಗೆ ಎರಡೂವರೆ ತಿಂಗಳ ಹಸಿಗೂಸಿದೆ. ನೀರಜ್ ಪನ್ವಾರ್ ಬೇಗುಂ ಬಜಾರ್ನಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದನು.
ಯುವತಿಯ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ನೀರಜ್ಗೆ ತಲೆ, ಎದೆ ಹಾಗು ಇನ್ನಿತರ ಭಾಗಗಳಿಗೆ ಇರಿದು ಕೊಂದಿದ್ದಾರೆ. ನೀರಜ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ನೀರಜ್ ಸಾವಿನ ಬಗ್ಗೆ ಆತನ ತಂದೆ ಮಾತನಾಡಿದ್ದು, ಪ್ರೇಮ ವಿವಾಹವಾಗಿದ್ದಕ್ಕೆ ನನ್ನ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಿಂದಿನಿಂದ ಆತನಿಗೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
