ಬೆಂಗಳೂರು
ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರನಿಗೆ ಲಂಚ ಹಣಕ್ಕಾಗಿ ಬೆದರಿಕೆ ಹಾಕುವ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಿಲುಕಿರುವ ಶಾಸಕ ಮುನಿರತ್ನ ಬಂಧನದ ಭೀತಿ ಎದುರಿಸುತ್ತಿದ್ದಾರೆ.
ಗುತ್ತಿಗೆದಾರ ಚೆಲುವರಾಜು ನೀಡಿರುವ ದೂರು ಆಧರಿಸಿ ವೈಯಾಲಿಕಾವಲ್ ಠಾಣೆ ಪೊಲೀಸರು ಎರಡು ಎಫ್ಐಆರ್ ದಾಖಲಿಸಿದ್ದಾರೆ.
ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು ಬಂಧಿಸಬಹುದು ಎಂಬ ಭೀತಿಯಿಂದ ಶುಕ್ರವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. ಆಪ್ತ ಸಹಾಯಕನ ಜೊತೆ ಹೊರಹೋಗಿ ಬರುತ್ತೇನೆಂದು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದ ಮುನಿರತ್ನ ಎಲ್ಲಿದ್ದಾರೆಂಬುದು ಗೊತ್ತಿಲ್ಲ.
ಸದ್ಯ ಅವರು ಬಳಸುವ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಪೊಲೀಸರ ಒಂದು ತಂಡ ಮೊಬೈಲ್ ಲೊಕೇಶನ್ ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ ಎಂದು ಮೂಲಗಳು ತಿಳಿಸಿವೆ.
ಯಾವುದೇ ಕ್ಷಣದಲ್ಲಿ ಪೊಲೀಸರು ತಮನ್ನು ಬಂಧಿಸಬಹುದು ಎಂಬ ಭೀತಿಯಿಂದಾಗಿಯೇ ಯಾರಿಗೂ ಮಾಹಿತಿ ನೀಡದೇ ತಲೆಮರೆಸಿಕೊಂಡಿದ್ದಾರೆ. ಕುಟುಂಬದ ಸದಸ್ಯರು ಕೂಡ ತಮಗೆ ಯಾವುದೇ ಮಾಹಿತಿ ಇಲ್ಲ ಎಂಬ ಹಾರಿಕೆ ಉತ್ತರವನ್ನು ನೀಡುತ್ತಿದ್ದಾರೆ.
ಈ ನಡುವೆ ಮುನಿರತ್ನ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳು ಅವರ ಮನೆಗೆ ಮುತ್ತಿಗೆ ಹಾಕಲು ಮುಂದಾಗಿವೆ ಈ ಹಿನ್ನೆಲೆಯಲ್ಲಿ ಮುನಿರತ್ನ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ
Previous Articleಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
Next Article ಸಿದ್ದರಾಮಯ್ಯ ಯಾರ ಜಾಗದಲ್ಲಿ ಮನೆ ಕಟ್ಟಿದ್ದಾರೆ.

1 ಟಿಪ್ಪಣಿ
Earnings from pc bitcoin mining software mining depend on hardware efficiency and market volatility.