ಬೆಂಗಳೂರು,ಜೂ.27:
ಆಸ್ತಿ ವಿಚಾರವಾಗಿ ನೆರವು ಕೇಳಿ ಬಂದ ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಜೊತೆ ಅನುಚಿತವಾಗಿ ವರ್ತಿಸುವ ಮೂಲಕ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಸಿಐಡಿ ತಂಡ ಇದೀಗ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
ದೂರುದಾರ ಮಹಿಳೆಯ ಹೇಳಿಕೆಯನ್ನ ಈಗಾಗಲೇ ದಾಖಲಿಸಿಕೊಂಡಿದ್ದ ಸಿಐಡಿ ಅಧಿಕಾರಿಗಳು ಹೇಳಿಕೆಗೆ ಆದರಿಸಿ ಹಲವು ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ ಆನಂತರ ಬಾಲಕಿ ಮತ್ತು ಇತರರನ್ನು ವಿಚಾರಣೆಗೆ ಒಳಪಡಿಸಿ ಹಲವು ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ದೂರುದಾರ ಮಹಿಳೆ ಮೃತಪಟ್ಟಿದ್ದಾರೆ.
ಯಡಿಯೂರಪ್ಪ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದು ಅವರು ತಮ್ಮ ವಕೀಲರ ಸಮ್ಮುಖದಲ್ಲಿಯೇ ತಮ್ಮ ವಿರುದ್ಧ ಮಾಡಲಾಗಿರುವ ಆರೋಪಗಳಿಗೆ ಉತ್ತರ ನೀಡಿದ್ದಾರೆ ಈ ಎಲ್ಲವನ್ನು ಕ್ರೂಡೀಕರಿಸಿ ಸಿಐಡಿ ತಂಡ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ
ಸಂತ್ರಸ್ತ ಬಾಲಕಿಯ ತಾಯಿ ಸಹಾಯ ಯಾಚಿಸಿ ಯಡಿಯೂರಪ್ಪ ಅವರ ಮನೆಗೆ ಬಂದಾಗ ಯಡಿಯೂರಪ್ಪ ಅವರು ಬಾಲಕಿ ದಾಖಲಿಸಿದ್ದ ಹಳೇ ಕೇಸ್ ಬಗ್ಗೆ ವಿಚಾರಿಸುತ್ತಾ ರೂಮಿಗೆ ಕರೆದೊಯ್ದು ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಆರೋಪಪಟ್ಟಿಯಲ್ಲಿ ಉಲ್ಲೇಖವಾಗಿದೆ. ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿರುವುದಾಗಿ ಆರೋಪಿಸಲಾಗಿದೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ.
ನಂತರ ಬಾಲಕಿಯ ತಾಯಿ ಇದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಪೋಸ್ಟ್ ಆಗಿದ್ದ ವಿಡಿಯೋ ಡಿಲೀಟ್ ಮಾಡಿಸಲು ಮೂವರು ಪ್ರಯತ್ನಿಸಿದ್ದಾರೆ. ವೈ.ಎಂ. ಅರುಣ್, ಎಂ.ರುದ್ರೇಶ್, ಜಿ.ಮರಿಸ್ವಾಮಿ ಎನ್ನುವರು ಮಹಿಳೆಯನ್ನು ಕರೆತಂದು ವಿಡಿಯೋ ಪೋಸ್ಟ್ ಡಿಲೀಟ್ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ನಾಲ್ವರ ವಿರುದ್ದವೂ ದ ಪೊಲೀಸರು, ಆರೋಪಪಟ್ಟಿ ದಾಖಲಿಸಿದ್ದಾರೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022


1 ಟಿಪ್ಪಣಿ
Betano – casinot https://betanogame.org/sv/ som betalar ut stort. Nya medlemmar får upp till €500 välkomstbonus och free spins. Snurra, satsa och vinn med bästa odds och omedelbara uttag. Spela idag.