ಬೆಂಗಳೂರು, ಮೇ.23-
ರಾಜ್ಯದ ಅತ್ಯಂತ ಪ್ರತಿಷ್ಠಿತ ಮತ್ತು ಹೆಮ್ಮೆಯ ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಬೆಡಗಿ ತಮನ್ನಾ ಭಾಟಿಯಾ ನೇಮಕಕ್ಕೆ ಸಂಸದ ಹಾಗೂ ಮೈಸೂರು ರಾಜ ವಂಶಸ್ಥ ಯದುವೀರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮನ್ನಾ ಭಾಟಿಯಾ ಕರ್ನಾಟಕದ ಸಂಸ್ಕೃತಿ, ಇತಿಹಾಸದೊಂದಿಗೆ ಯಾವುದೇ ನಂಟು ಹೊಂದಿಲ್ಲ. ಕನ್ನಡತನದ ಗಂಧ ಗಾಳಿ ಗೊತ್ತಿಲ್ಲದ ಈ ನಟಿಯನ್ನು ನಮ್ಮ “ಗಂಧದ”ದ ಸೋಪಿನ ಸಂಸ್ಥೆಗೆ ರಾಯಭಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.
1916ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಕೃಷ್ಣರಾಜ ಒಡೆಯರ್ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು. ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು. ಇಂಥ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಅದು ಸಾಲದೆಂಬಂತೆ ಆರು ಕೋಟಿ ರೂ.ಗಳಿಗೂ ಹೆಚ್ಚು ರೂಪಾಯಿ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂಬುದು ಸರ್ಕಾರದ ನಿರ್ಧಾರವಾಗಿದ್ದರೆ ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಾಗಿತ್ತು. ತಮನ್ನಾ ಭಾಟಿಯಾಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕಿಡಿ ಕಾರಿದ್ದಾರೆ.
Previous Articleನಮ್ಮ ಮೆಟ್ರೋ ದ ವಿಕೃತ ಸಿಕ್ಕಿಬಿದ್ದ.
Next Article ವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು

1 ಟಿಪ್ಪಣಿ
Mostbet – onde seu primeiro depГіsito vira 200% a mais + 200 giros grГЎtis – https://mostbetpt.pro/como-se-registrar/ , Mostbet te entrega 125% de bГґnus + 310 giros grГЎtis – aproveite jГЎ .