ನವದೆಹಲಿ: ಮೂರು ದಶಕಗಳ ಹಿಂದಿನ ರಸ್ತೆ ಅಪಘಾತ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಸಿಧು ಅವರಿಗೆ ಈ ಹಿಂದೆ ಒಂದು ಸಾವಿರ ರೂ. ದಂಡ ವಿಧಿಸಿತ್ತು.
ಮೃತನ ಕುಟುಂಬಸ್ಥರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. 1988ರ ಡಿಸೆಂಬರ್ 27ರಂದು ಪಟಿಯಾಲಾದಲ್ಲಿ ನಡೆದ ಈ ಘಟನೆಯಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎನ್ನುವವರು ಸಾವಿಗೀಡಾಗಿದ್ದರು.
ತೀರ್ಪಿನ ಹಿನ್ನೆಯಲ್ಲಿ ಟ್ವೀಟ್ ಮಾಡಿರುವ ನವಜೋತ್ ಸಿಂಗ್ ಸಿಧು, ನ್ಯಾಯಾಲಯ ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ್ದಾರೆ.
ರಸ್ತೆ ಅಪಘಾತ: ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ
Previous Articleಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ನಿಧನ
Next Article ಭದ್ರತಾ ಸಿಬ್ಬಂದಿಯಿಲ್ಲದೆ ತಾಜ್ ಹೋಟೆಲ್‌ಗೆ ಬಂದ ರತನ್ ಟಾಟಾ!