ಬೆಂಗಳೂರು,ಆ.1-
ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅರ್ಹ ಫಲಾನುಭವಿಗಳಿಗೆ ಉಚಿತ ಅಕ್ಕಿ ನೀಡುವ ಯೋಜನೆ ಸಂಬಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಉಂಟಾಗಿದ್ದ ಸಂಘರ್ಷಕ್ಕೆ ಇದೀಗ ತಾತ್ಕಾಲಿಕ ವಿರಾಮ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.
ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗೆ ಮಾಸಿಕ 10 ಕೆಜಿ ಅಕ್ಕಿ ನೀಡುವ ಯೋಜನೆಗೆ ಲಭ್ಯವಿರುವ ಅಕ್ಕಿ ಕೊರತೆಯಿಂದಾಗಿ ರಾಜ್ಯ ಸರ್ಕಾರ ನೆರೆಯ ರಾಜ್ಯ ಮತ್ತು ಖಾಸಗಿ ಸಂಸ್ಥೆಗಳಿಂದ ಅಕ್ಕಿ ಖರೀದಿಸಿ ಪ್ರತಿಯೊಬ್ಬ ವ್ಯಕ್ತಿಗೆ 5 ಕಿಲೋ ವಿತರಿಸುತ್ತಿದೆ ಉಳಿದ ಐದು ಕಿಲೋಗೆ ಆಗುವ ಮೊತ್ತವನ್ನು ಹಣದ ರೂಪದಲ್ಲಿ ನೀಡಲಾಗುತ್ತಿತ್ತು.
ಹಣದ ಬದಲಿಗೆ ಅಕ್ಕಿಯನ್ನು ನೀಡಲು ನಿರ್ಧರಿಸಿದ ರಾಜ್ಯ ಸರ್ಕಾರ ಅದನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ತಗುಲುವ ವೆಚ್ಚವನ್ನು ಭರಿಸುವುದಾಗಿ ತಿಳಿಸಿತ್ತು. ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿರಲಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು ಲೋಕಸಭೆ ಚುನಾವಣೆಯ ವೇಳೆ ಇದು ಪ್ರಮುಖ ಚರ್ಚೆಯ ವಿಷಯವಾಗಿತ್ತು.
ಇದೀಗ ಕೇಂದ್ರ ಆಹಾರ ಸಚಿವರಾಗಿ ರಾಜ್ಯದವರೇ ಆದ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕರಿಸಿದ್ದು ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ನೀಡುವುದಾಗಿ ಘೋಷಿಸಿದ್ದಾರೆ ಈ ಮೂಲಕ ರಾಜ್ಯ ಮತ್ತು ಕೇಂದ್ರದ ನಡುವೆ ಉಂಟಾಗಿದ್ದ ಬಿಕ್ಕಟ್ಟು ಬಗೆಹರಿದಂತಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ
ಯಾವುದೇ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಅಕ್ಕಿಯನ್ನು ಕೇಳಿದರೆ ಕೇಂದ್ರ ಸರ್ಕಾರವು ಅಕ್ಕಿಯನ್ನು ಕೊಡಲಿ ಸಿದ್ಧವಿದೆ. ಇನ್ನು ಕಳೆದ ವರ್ಷ ಕರ್ನಾಟಕ ಸರ್ಕಾರ ಅಕ್ಕಿಯನ್ನು ಕೇಳಿದಾಗ ದೇಶದಾದ್ಯಂತ ಬರಗಾಲದ ಪರಿಸ್ಥಿತಿ ಇತ್ತು. ಹೀಗಾಗಿ, ಕರ್ನಾಟಕದ ಮಾದರಿಯಲ್ಲಿಯೇ ಎಲ್ಲಾ ರಾಜ್ಯಗಳು ಅಕ್ಕಿಯನ್ನು ಕೇಳಿದರೆ ಸ್ಟಾಕ್ ಸಮಸ್ಯೆ ಆಗಬಹುದು ಎಂದು ಅಕ್ಕಿಯನ್ನು ಕೊಡದಿರಲು ತೀರ್ಮಾನ ಮಾಡಲಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲೆಡೆ ಉತ್ತಮ ಬೆಳೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಾಜ್ಯಗಳು ಅಕ್ಕಿಯನ್ನು ಕೇಳಿದರೆ 28 ರುಪಾಯಿ ದರದಲ್ಲಿ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಈಗ ಸದಸ್ಯಕ್ಕೆ ಯಾವುದೇ ರಾಜ್ಯದಿಂದ ಅಕ್ಕಿ ಬೇಕೆಂದು ಮನವಿ ಬಂದಿಲ್ಲ ಎಂದು ಹೇಳಿದರು
ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.
Previous Articleರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
Next Article ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಸಂಘರ್ಷ.