ಬೆಂಗಳೂರು,ಆ.1-
ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ಆವರಿಸಿರುವ ಬೆನ್ನಲ್ಲೇ ತಮ್ಮ ಪಕ್ಷ ಒಡೆದ ಮನೆಯಾಗಿದೆ ಎಂದು ಹಿರಿಯ ನಾಯಕ ಹಿರಿಯ ನಾಯಕ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾಮಾನ್ಯ ವಾಗಿ ಆಡಳಿತ ಪಕ್ಷದಲ್ಲಿ ಒಡಕು ಸಹಜ ಆದರೆ ದುರದೃಷ್ಟವಶಾತ್ ಪ್ರತಿ ಪಕ್ಷದಲ್ಲಿ ಒಡಕು ಹೆಚ್ಚಾಗಿದೆ. ಬಿಜೆಪಿಯಲ್ಲಿ ವಿಜಯೇಂದ್ರ ಅಶೋಕ್ ಜಾರಕಿಹೊಳಿ ಯತ್ನಾಳ್ ಮೊದಲಾದ ಬಣಗಳು ಉಂಟಾಗಿದೆ ಇದು ಪಕ್ಷ ಸಂಘಟನೆ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು
ರಾಜ್ಯದಲ್ಲಿ ಆಡಳಿತ ಪಕ್ಷದಲ್ಲೇ ಹಲವಾರು ಗೊಂದಲಗಳು ಇವೆ ಜನಸಾಮಾನ್ಯರಿಗೆ ನೀಡಬೇಕಾದ ನಿವೇಶನಗಳನ್ನು ಮುಖ್ಯಮಂತ್ರಿ ನಿಯಮ ಬಾಹಿರವಾಗಿ ತಮ್ಮ ಪತ್ನಿಯ ಹೆಸರಿಗೆ ಮಾಡಿಸಿಕೊಳ್ಳುತ್ತಿದ್ದಾರೆ ಇಂತಹವರ ವಿರುದ್ಧ ಹೋರಾಟ ನಡೆಸಬೇಕಾದ ಪ್ರತಿಪಕ್ಷದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಕಾರ್ಯಕರ್ತರಗಳು ಅತಿವ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಎನ್ ಡಿ ಎ ಮಿತ್ರಕೂಟಕ್ಕೆ ಉತ್ತಮ ಅವಕಾಶವಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಜೆಡಿಎಸ್ ಜೊತೆಗೆ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಬೇಕು ನಿರ್ಧಾರಗಳನ್ನು ಕೈಗೊಳ್ಳುವಾಗ ಬಿಜೆಪಿ ನಾಯಕರು ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದರು
ಜೋಶಿ ಸಂಧಾನ:
ಈ ನಡುವೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸಂಧಾನ ಮಾತುಕತೆ ನಡೆಸಿದರು.
ವರಿಷ್ಠರ ಸೂಚನೆಯ ಮೇರೆಗೆ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ ಜೋಶಿ ಅವರು ಉಭಯ ಪಕ್ಷಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸುವ ಸಂಬಂಧ ಕೈಗೊಳ್ಳಬೇಕಾಗಿರುವ ನಿರ್ಧಾರಗಳ ಕುರಿತು ಗೃಹ ಸಚಿವ ಅಮಿತ್ ಷಾ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಮಣಿಸುವ ದೃಷ್ಟಿಯಿಂದ ಉಭಯ ಪಕ್ಷಗಳು ಜಂಟಿಯಾಗಿ ಹೋರಾಟ ಮಾಡುವ ಅಗತ್ಯವಿದೆ ಇಂತಹ ಸಮಯದಲ್ಲಿ ರಾಜ್ಯದ ಕೆಲವು ನಾಯಕರು ತೀರ್ಮಾನ ಸಂಘಟಿತ ಹೋರಾಟಕ್ಕೆ ಅಡ್ಡಿ ಮಾಡಬಾರದು ಎಂದು ಕುಮಾರಸ್ವಾಮಿ ಹೇಳಿದರೆ ಎನ್ನಲಾಗಿದೆ.
ಅಂತಿಮವಾಗಿ ಕುಮಾರಸ್ವಾಮಿ ಜೋಶಿ ಅವರು ಮಾಡಿದ ಸಂಧಾನಕ್ಕೆ ಮಣಿದಿದ್ದು ಉದ್ದೇಶಿತ ಪಾದಯಾತ್ರೆಯಿಂದ ಹಾಸನದ ಮಾಜಿ ಶಾಸಕ ಪ್ರೀತಮ್ ಗೌಡ ಅವರನ್ನು ಹೊರಗಿಟ್ಟಿದ್ದೆ ಆದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಮರು ಚಿಂತನೆ ಮಾಡಲಿದ್ದಾರೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.
Previous Articleರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
Next Article ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.