Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಿಗೆ ಕಾಂಗ್ರೆಸ್ ಮೊರೆ.
    Trending

    ರಾಜ್ಯಪಾಲರಿಗೆ ಕಾಂಗ್ರೆಸ್ ಮೊರೆ.

    vartha chakraBy vartha chakraಆಗಷ್ಟ್ 31, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.31-
    ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದರೆ ಇತ್ತ ಕಾಂಗ್ರೆಸ್ ಶಾಸಕ ಸಂಸದರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಒಗ್ಗಟ್ಟಿನ ಪ್ರದರ್ಶನ ನಡೆಸಿದರು.
    ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೈದಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಸಮಾವೇಶಗೊಂಡು ಪ್ರತಿಭಟನೆ ನಡೆಸಿದ ಕಾಂಗ್ರೆಸ್ಸಿನ ಎಲ್ಲ ಸಚಿವ ಶಾಸಕರು ಸಂಸದರು ಮತ್ತು ಹಿರಿಯ ನಾಯಕರು ಮುಖ್ಯಮಂತ್ರಿ ಬೆಂಬಲಕ್ಕೆ ನಿಲ್ಲುವ ಘೋಷಣೆ ಮಾಡಿದರು
    ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರು ತಮ್ಮ ಮುಂದೆ ತನಿಖೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ವಿರುದ್ಧ ತನಿಖೆಗೆ ಅನುಮತಿ ನೀಡಿಲ್ಲ ಎಂದು ಪ್ರತಿಭಟನೆಕಾರರು ಆಪಾದಿಸಿದರು.
    ಕಾಂಗ್ರೆಸ್ ಶಾಸಕರು ಮತ್ತು ಹಿರಿಯ ನಾಯಕರು ನಡೆಸುತ್ತಿದ್ದ ಧರಣಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪಾಲ್ಗೊಂಡರು.
    ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಘೋಷಣೆ ಮೊಳಗಿಸಿದರು. ರಾಜ್ಯದಲ್ಲಿನ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಭವನವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರಿದರು ರಾಜ್ಯಪಾಲರು ತನಿಖೆಗೆ ಅನುಮತಿ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
    ಆನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ನಾಯಕರು ಮೆರವಣಿಗೆಯಲ್ಲಿ ರಾಜಭವನದತ್ತ ತೆರಳಿದರು. ಈ ವೇಳೆ ಸುದ್ದಿಗಾರರೊಂದಿಗ ಮಾತನಾಡಿದ ಡಿ.ಕೆ. ಶಿವಕುಮಾರ್, ನಾವುಸಿದ್ದರಾಮಯ್ಯ ಪರವಾಗಿ ರಾಜಭವನ ಚಲೊ ಮಾಡುತ್ತಿಲ್ಲ. ರಾಜ್ಯಪಾಲರ ಆದೇಶ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದೇವೆ. ರಾಜ್ಯಪಾಲರ ಕಚೇರಿ ದುರಪಯೋಗ ಆಗುತ್ತಿದೆ. ಅದರ ವಿರುದ್ಧ ನಮ್ಮ ಹೋರಾಟ’ ಎಂದರು.
    ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಕೋರಿದ ಮನವಿಯ ವಿಚಾರದಲ್ಲಿ ಒಂದೇ ದಿನದಲ್ಲಿ ನೋಟಿಸ್ ನೀಡಿರುವುದು ಎಲ್ಲರಿಗೂ ಗೊತ್ತು. ಈ ಹಿಂದೆ ರಾಜ್ಯಪಾಲರ ಬಳಿ ಹಲವರ ಕಡತ ಹೋಗಿದೆ. ರಾಜ್ಯಪಾಲರು ಸರ್ಕಾರದ ಪ್ರತಿನಿಧಿ ಆಗಿ ಕೆಲಸ ಮಾಡಬೇಕು. ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು’ ಎಂದು ಅಸಮಾಧಾನ ವ್ಯಕ್ತಪಡಿಸಿದರು
    ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಚಿವರು, ಶಾಸಕರು, ಕಾಂಗ್ರೆಸ್‌ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿರುವಂತೆ ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
    ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಯಾರೊ ದೂರು ಕೊಟ್ಟರೆಂದು ಮುಖ್ಯಮಂತ್ರಿ ವಿರುದ್ದ ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಆದರೆ, ಬಿಜೆಪಿ- ಜೆಡಿಎಸ್‌ ನಾಯಕರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅವರು ಅನುಮತಿ ಕೊಡುತ್ತಿಲ್ಲ. ರಾಜಭವನ ರಾಜಕೀಯ ಭವನ ಆಗಬಾರದು. ಸಂವಿಧಾನದಡಿ ರಚನೆಯಾದ ಪೀಠ ರಾಜ್ಯಪಾಲರದ್ದು‌. ಇಂತಹ ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗಬಾರದು. ನ್ಯಾಯಸಮ್ಮತವಾಗಿ ಈ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಕೊಡಿ ಎಂದು ಮನವಿ ಮಾಡಿದ್ದೇವೆ’ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಜೆಡಿಎಸ್ ನ್ಯಾಯ ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದೇವನಹಳ್ಳಿ Airport ಲ್ಲಿ ಸಿಕ್ಕಿದ ಉಗ್ರ.
    Next Article ಗಣೇಶ ಮೂರ್ತಿ ಉಚಿತ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Glennhof ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.