ರಾಜ್ಯಪಾಲರು ಸಹಜ ನ್ಯಾಯ ಪ್ರಕ್ರಿಯೆಯನ್ನು ಪಾಲಿಸಿಲ್ಲ. ಪ್ರಕರಣದಲ್ಲಿ ಒಬ್ಬರ ದೂರಿನ ಅನುಸಾರ ಶೋಕಾಸ್ ನೋಟಿಸ್ ನೀಡಿದ್ದಾರೆ. ಮತ್ತಿಬ್ಬರ ದೂರಿನ ಬಗ್ಗೆ ಶೋಕಾಸ್ ನೋಟಿಸ್ ಅಗತ್ಯವಿಲ್ಲವೆಂದಿದ್ದಾರೆ.
–ರಾಜ್ಯಪಾಲರು ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಹೆಚ್ ಡಿ ಕುಮಾರಸ್ವಾಮಿ ಪ್ರಕರಣದಲ್ಲಿ ಅನುಮತಿ ನೀಡಿಲ್ಲ .
-ಮುಡಾ ಭೂಸ್ವಾಧೀನವಾಗದೇ ಜಮೀನು ಬಳಸಿಕೊಂಡಿದ್ದಕ್ಕೆ ಬದಲಿ ಜಮೀನು ನೀಡಿದೆ. ಈ ಬಗ್ಗೆ ದಾಖಲೆ ನ್ಯಾಯಾಲಯಕ್ಕೆ ಸಲ್ಲಿಸಿದ ಸಿಂಘ್ವಿ.
-ಈ ರೀತಿ ಸಂಶಯಾಸ್ಪದ ಹಿನ್ನೆಲೆಯ ವ್ಯಕ್ತಿಗಳಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬಾರದು ಎಂದು ವಾದ.
-50 50 ನಿವೇಶನ ಹಂಚಿಕೆ ಬಿಜೆಪಿ ಸರ್ಕಾರದ ಸಮಯದಲ್ಲಾಗಿದೆ.ಹೀಗಾಗಿ ಈ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲ ಎಂದು ಅಭಿಷೇಕ್ ಮನು ಸಿದ್ದರಾಮಯ್ಯ ಪರ ವಾದ ಮಂಡಿಸಿದರು.
ಸಿಎಂ ಪರ ವಾದ ಮಂಡಿಸಿದ ಪ್ರೋ. ರವಿವರ್ಮ ಕುಮಾರ್.
* ಅಕ್ರಮ ಮತ್ತು ಅಧಿಕಾರ ದುರುಪಯೋಗವಾಗಿರುವ ಸಾಧ್ಯತೆ ಇದೆ ಎಂದು ರಾಜ್ಯಪಾಲರ ಉಲ್ಲೇಖವಿದೆ.ಸಹಿ ಹಾಕಿದ ಬಳಿಕ ಷೋಕಾಸ್ ನೋಟಿಸ್ ನೀಡಿದ್ದಾರೆ.
ಆ. 14 ರಂದು ಫೈಲ್ ಪರಿಶೀಲಿಸಿದ್ದೇನೆ, ಡಿಕ್ಟೇಷನ್ ನೀಡಿದ್ದೇನೆ ಎಂದು ಬರೆಯಲಾಗಿದೆ..
ಆದರೆ ಟಿ.ಜೆ.ಅಬ್ರಹಾಂ ನೀಡಿದ ದೂರಿನ್ವಯ ಜು. 26 ರಂದು 26.07 ರಂದು ಫೈಲ್ ಸಿದ್ದಪಡಿಸಲಾಗಿದೆ. ಜು 5 ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ಕಡತದಲ್ಲಿ ಅದರ ಉಲ್ಲೇಖವಿಲ್ಲ.
-ರಾಜ್ಯಪಾಲರ ಆದೇಶದಲ್ಲಿ 25 ಸೆಕ್ಷನ್ ಗಳನ್ನು ಉಲ್ಲೇಖಿಸಲಾಗಿದೆ.ಉದಾಹರಣೆಗೆ ಫೋರ್ಜರಿ ಮತ್ತಿತರ ಸೆಕ್ಷನ್ ಉಲ್ಲೇಖಿಸಿದ್ದಾರೆ.ಆದರೆ ಎಲ್ಲಿ ಸಿಎಂ ಫೋರ್ಜರಿ ಮಾಡಿದ್ದಾರಾ ಎಂಬುದಕ್ಕೆ ಉತ್ತರವಿಲ್ಲ.
•ಜಮೀನು ಸ್ವಾಧೀನವಾದ ಬಳಿಕ ಪರಿಹಾರದ ನೋಟಿಸ್ ವಿಳಂಬವಾಗಿ ತಲುಪಿದೆ. ಮುಡಾ ಜಮೀನನ್ನು ಬೌತಿಕವಾಗಿ ಸ್ವಾಧೀನಕ್ಕೆ ಪಡಿದಿರಲಿಲ್ಲ. ನಂತರ ಸೆ.48 ಅಡಿ ಜಮೀನನ್ನು ಡಿನೋಟಿಫಿಕೇಷನ್ ಮಾಡಲಾಗಿದೆ. •ಮಹಜರ್ ಮಾಡಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದಿರಲಿಲ್ಲ. ರಾಜ್ಯಪಾಲರು ಮುಡಾ ಸ್ವಾಧೀನದಲ್ಲಿತ್ತು ಎಂದು ಹೇಳಿದ್ದಾರೆ.ಹೀಗಾಗಿ ರಾಜ್ಯಪಾಲರ ಆದೇಶವೇ ಕಾನೂನುಬಾಹಿರವಾಗಿದೆ.
•ಸಿದ್ದರಾಮಯ್ಯ ಮಾತ್ರ ಕಳೆದ ಐವತ್ತು ವರ್ಷಗಳಲ್ಲಿ ಅವಧಿ ಪೂರೈಸಿದ್ದು,ಐದು ವರ್ಷಗಳ ನಂತರವೂ ಮತ್ತೊಮ್ಮೆ ಸಿಎಂ ಆಗಿ ಆಯ್ಕೆಯಾಗಿದ್ದಾರೆ.
ಈ ರೀತಿ ಜುಜುಬಿ ಸೈಟ್ ಗೆ ಸಿಎಂ ಹೀಗೆಲ್ಲಾ ಮಾಡುವ ಅಗತ್ಯವಿರಲಿಲ್ಲ
•60- 40 ಗೆ ಅವರ ತಕರಾರಿಲ್ಲ, 50- 50 ಅನುಪಾತಕ್ಕೆ ತಕರಾರಿದೆ. ಪರಿಹಾರದ ನಿವೇಶನ ಕೊಟ್ಟಿರುವುದು ಅರ್ಜಿದರರಲ್ಲ ಅಲ್ಲ ಮುಡಾ.ಈ ರೀತಿ ಜನಪ್ರಿಯ ನಾಯಕನ ವಿರುದ್ಧ ರಾಜ್ಯಪಾಲರು ಈ ರೀತಿ ಅನುಮತಿ ನೀಡಿರುವುದು ರಾಜಕೀಯ ದುರುದ್ದೇಶ ಸ್ಪಷ್ಟಪಡಿಸುತ್ತದೆ.
-ಅಧಿಕಾರದಲ್ಲಿದ್ದಾಗ ಸಂಬಂಧಿಕರು, ಅಧಿಕಾರಿಗಳು ಅಸೂಯೆಯಿಂದ ಏನಾದರೂ ಮಾಡಿರಬಹುದು.. ಅದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯರನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಸಿಎಂ ಪರ ಪ್ರೊ. ರವಿವರ್ಮಕುಮಾರ್ ವಾದಮಂಡನೆ.
ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಮಂಡನೆ.. •ಯಾವುದೇ ತನಿಖೆಯ ಆಧಾರವಿಲ್ಲದೇ 17 ಎ ಅನುಮತಿಯೇ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
•ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ರಾಜ್ಯಪಾಲರು ಪಾಲಿಸಿಲ್ಲ..
•ಹೀಗಾಗಿ ರಾಜ್ಯಪಾಲರ ಅನುಮತಿ ಕಾನೂನುಬಾಹಿರವೆಂದು ವಾದಮಂಡನೆ.
ದೂರುದಾರ ಟಿ.ಜೆ.ಅಬ್ರಹಾಂ ಪರ ರಂಗನಾಥ್ ರೆಡ್ಡಿ ವಾದ.
•ಒಂದೆಡೆ ಕೃಷಿ ಜಮೀನೆಂದು , ಮತ್ತೊಂದೆಡೆ ಮುಡಾ ಜಮೀನು ಒತ್ತುವರಿ ಮಾಡಿದೆ ಎನ್ನುತ್ತಿದ್ದಾರೆ.
* ಸಿಎಂ ಪರ ವಕೀಲತ ಎರಡೆರಡು ರೀತಿಯಲ್ಲಿ ವಾದ ಮಂಡಿಸುತ್ತಿದ್ದಾರೆ
* ಪ್ರಕ್ರಿಯೆ ಪಾಲಿಸದೇ ಹಣವನ್ನು ಠೇವಣಿ ಇಡುವುದು ಸಾಧ್ಯವಿಲ್ಲ .
•ಇದು ಹೇಗಾಗಿದೆ ಎಂದರೆ ದೇವನೂರು ಬಡಾವಣೆಯ ಜಮೀನಿಗೆ ವಿಜಯನಗರದಲ್ಲಿ ಬದಲಿ ನಿವೇಶನ. ಚಿಂತಾಮಣಿಯ ಜಮೀನಿಗೆ ಸದಾಶಿವನಗರದಲ್ಲಿ ನಿವೇಶನ ಕೊಟ್ಟಂತಾಗಿದೆ. ಎಂದು ವಾದ ಮಂಡನೆ
1 ಟಿಪ್ಪಣಿ
хотите окунуться в азартные игры? vavada зеркало рабочее позволяет войти в аккаунт в казино vavada. попробуйте телеграм-канал для удобного доступа. оцените широкие возможности: от промокодов до рейтинговых игр.