ಬೆಂಗಳೂರು, ಆ.23-
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಯಾವುದೇ ಪ್ರಯತ್ನ ನಡೆಸುವುದಿಲ್ಲ ಒಂದು ವೇಳೆ ಆಂತರಿಕ ಕಲಹದಿಂದ ಈ ಸರ್ಕಾರ ಪತನ ಹೊಂದಿದರೆ ನಾವು ಜವಾಬ್ದಾರರಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಷಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿವೇಶನ ಹಂಚಿಕೆ ಆಕ್ರಮದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ತಳಮಳ ಆರಂಭವಾಗಿದೆ ಬಹುತೇಕ ಶಾಸಕರು ಮುಖ್ಯಮಂತ್ರಿ ಮತ್ತು ಸರ್ಕಾರದ ವಿರುದ್ಧ ತಿರುಗಿ ಬೀಳುವ ಹವಣಿಕೆಯಲ್ಲಿದ್ದಾರೆ ಎಂದು ತಿಳಿಸಿದರು
ರಾಜ್ಯದ ಜನತೆ ಕಾಂಗ್ರೆಸ್ ಗೆ ಐದು ವರ್ಷ ಆಡಳಿತ ನಡೆಸಲು 136 ಸ್ಥಾನಗಳನ್ನು ನೀಡಿದ್ದಾರೆ. ಬಹುಮತ ಹೊಂದಿರುವ ಸರ್ಕಾರವನ್ನು ಅಭದ್ರಗೊಳಿಸುವುದು ಅಷ್ಟು ಸುಲಭದ ಮಾತಲ್ಲ ಎಂದು ಹೇಳಿದರು.
ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಯಾರೂ ಕೂಡ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಆದರೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಯಾವಾಗ ಏನು ಬೇಕಾದರೂ ಆಗಬಹುದು ಅದಕ್ಕೆ ನಾವು ಜವಾಬ್ದಾರರಲ್ಲ ಎಂದರು.
Previous Articleಸಿದ್ದರಾಮಯ್ಯ ಅವರಿಗೆ ಕೋರ್ಟ್ ಶೋಕಾಸ್.
Next Article ನಟ ದರ್ಶನ್ ಕೇಸ್- ತನಿಖೆ ಪೂರ್ಣ.