Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಗಾಂಧಿ ಗೆ ಬಿಜೆಪಿ ಹಾಕಿದ ಪ್ರಶ್ನೆಗಳು ಯಾವುವು ಗೊತ್ತಾ ?
    ಸುದ್ದಿ

    ರಾಹುಲ್ ಗಾಂಧಿ ಗೆ ಬಿಜೆಪಿ ಹಾಕಿದ ಪ್ರಶ್ನೆಗಳು ಯಾವುವು ಗೊತ್ತಾ ?

    vartha chakraBy vartha chakraಆಗಷ್ಟ್ 8, 202543 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ‌.8-
    ಮತಗಳ್ಳತನವಾಗಿದೆ ಎಂದು ಕರ್ನಾಟಕದಲ್ಲಿ ಪ್ರತಿಭಟನೆಗೆ ಬಂದಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ರಾಜ್ಯದ ಕೆಲವು ಸಮಸ್ಯೆಗಳನ್ನು ಪಟ್ಟಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಇವುಗಳಿಗೆ ಉತ್ತರ ನೀಡಿ ರಾಹುಲ್ ಗಾಂಧಿ ಅವರೇ ಎಂದು ಆಗ್ರಹಿಸಿದೆ
    ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕಾಂಗ್ರೆಸ್‌ನ ಚುನಾವಣೆಯ ಖರ್ಚಿಗಾಗಿ, ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡ ಹಗರಣವನ್ನು ಜಾರಿ ನಿರ್ದೇಶನಾಲಯ ಬಯಲು ಮಾಡಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಹೊರತು ಬೇರೆ ಯಾವುದೇ ಕ್ರಮಗಳನ್ನು ನಿಮ್ಮ ಸರ್ಕಾರ ಕೈಗೊಂಡಿಲ್ಲ. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಿದ್ದ ನಿಧಿಯನ್ನು ಕಾಂಗ್ರೆಸ್‌ ತನ್ನ ಪಾರ್ಟಿ ಫಂಡ್‌ ಗೆ ಬಳಸಿದಕ್ಕಾಗಿ ನೀವು ಅವರ ಕ್ಷಮೆಯಾಚಿಸುವುದಿಲ್ಲವೇ..?
    ಮುಡಾ ಹಗರಣ, ಕಾರ್ಮಿಕ ಕಿಟ್ ಹಗರಣ, ವಸತಿ ಹಗರಣ, ಅಬಕಾರಿ ಲೈಸೆನ್ಸ್‌ ನವೀಕರಣ ಹಗರಣ, ವೈನ್ ವ್ಯಾಪಾರಿಗಳಿಂದ 200 ಕೋಟಿ ಲಂಚಕ್ಕೆ ಬೇಡಿಕೆ ಸೇರಿದಂತೆ, ನಿಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಇದೇನಾ ನೀವು ದ್ವೇಷದ ಅಂಗಡಿಯಲ್ಲಿ ತೆರೆದ ‘ಭ್ರಷ್ಟಾಚಾರದ ಮಾರುಕಟ್ಟೆ’.?
    ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿದ್ದ 40 ಸಾವಿರ ಕೋಟಿ ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿನಿಯೋಗಿಸುವ ಮೂಲಕ, ನಿಮ್ಮ ಸರ್ಕಾರ ಪರಿಶಿಷ್ಟರಿಗೆ ಮಹಾದ್ರೋಹ ಎಸಗಿದೆ. ನೀವು ನಮ್ಮ ಪರಿಶಿಷ್ಟ ಸಮುದಾಯದ ಸಹೋದರ-ಸಹೋದರಿಯರ ಬಳಿ ಯಾವಾಗ ಕ್ಷಮೆಯಾಚಿಸುತ್ತಿರಿ ಮತ್ತು ಅವರ ಹಣವನ್ನು ಯಾವಾಗ ಹಿಂದಿರುಗಿಸುತ್ತೀರಿ ಎಂದು ಹೇಳುವಿರಾ..?
    ನಿಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲು ಸಂವಿಧಾನವನ್ನೇ ಬದಲಾಯಿಸುತ್ತಾರಂತೆ. ನಿಮ್ಮ ಡಿಸಿಎಂ ಹೇಳಿಕೆಗೆ ನಿಮ್ಮ ಸಹಮತವಿದೆಯೇ..??
    ಬಾಬಾ ಸಾಹೇಬ್‌ ಅಂಬೇಡ್ಕರ್‌ ವಿರಚಿತ ಸಂವಿಧಾನವನ್ನು ಬದಲಾಯಿಸಲು ನೀವು ಮಾಡಿದ ಪ್ರಯತ್ನಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಿರಾ..?
    ಜನಸಾಮಾನ್ಯರಿಗೆ ಬೆಲೆಯೇರಿಕೆಯ ಬರೆ ಎಳೆದ ನೀವು, ಅವರ ಬಳಿ ಕ್ಷಮೆಯಾಚಿಸುವುದಿಲ್ಲವೇ..?
    ಕನ್ನಡ ಓದಲು, ಬರೆಯಲು ಬಾರದ ಮಂತ್ರಿಗೆ ಶಿಕ್ಷಣ ಸಚಿವನ ಪಟ್ಟ ನೀಡಿದ ಪರಿಣಾಮ ಕರ್ನಾಟಕದ ಶಿಕ್ಷಣ ಇಲಾಖೆ ಬೋರಲು ಬಿದ್ದಿದೆ. ಮಕ್ಕಳಿಗೆ ಶೂ, ಸಾಕ್ಸ್‌, ಸಮವಸ್ತ್ರ ಸಹ ನೀಡಲು ಬೊಕ್ಕಸದಲ್ಲಿ ದುಡ್ಡಿಲ್ಲದಷ್ಟು ಸರ್ಕಾರ ದಿವಾಳಿಯಾಗಿದೆ. ಕರ್ನಾಟಕವನ್ನು ದಿವಾಳಿ ಮಾಡಿರುವ ನೀವು ಈ ಬಗ್ಗೆ ಕನ್ನಡಿಗರ ಕ್ಷಮೆಯಾಚಿಸುತ್ತೀರಾ..?
    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಮಾದಕ ದ್ರವ್ಯ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿವೆ. ಗುಜರಾತ್ ಎಟಿಎಸ್ ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ ಅಲ್-ಖೈದಾ ಉಗ್ರನನ್ನು ಬಂಧಿಸಿದೆ. ಮುಂಬೈ ಪೊಲೀಸರು ಮೈಸೂರಿನಲ್ಲಿ ಮಾದಕ ದ್ರವ್ಯ ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದಾರೆ. ಆದರೆ ಇವು ಯಾವುದೂ ಕರ್ನಾಟಕ ಪೊಲೀಸರ ಗಮನಕ್ಕೆ ಬಂದಿಲ್ಲ. ನಿಮ್ಮ ಸರ್ಕಾರದ ಆಂತರಿಕ ಭದ್ರತಾ ಲೋಪ ಮತ್ತು ಗುಪ್ತಚರ ವೈಫಲ್ಯಗಳ ಬಗ್ಗೆ ನೀವು ಕ್ಷಮೆಯಾಚಿಸುವುದಿಲ್ಲವೇ..?
    ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ತಳ ಸಮುದಾಯದ ಮಹಿಳೆಯರ ಮೇಲೆ ಮಾನವಕುಲ ತಲೆತಗ್ಗಿಸುವಂತಹ ಪೈಶಾಚಿಕ ಘಟನೆ ನಡೆದಿವೆ. ಆ ಮಹಿಳೆಯರಿಗೆ ನಿಮ್ಮ ಸರ್ಕಾರದಿಂದ ಇದುವರೆಗೂ ನ್ಯಾಯವು ದೊರೆತಿಲ್ಲ, ಆರೋಪಿಗಳ ಬಂಧನವೂ ಆಗಿಲ್ಲ. ಮಹಿಳೆಯರ ಮೇಲಾದ ಈ ದೌರ್ಜನ್ಯಗಳ ಬಗ್ಗೆ ನೀವು ಮೌನ ಮುರಿಯುವುದು ಯಾವಾಗ..?
    ಭಯೋತ್ಪಾದಕ ಗಲಭೆಕೋರರಿಗೆ ಬೆಂಬಲ ನೀಡಿದ ನೀವು ನಾಡಿನ ಜನರ ಕ್ಷಮೆಯಾಚಿಸುವುದಿಲ್ಲವೇ..?
    ಅನೇಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಷ್ಟಾದರೂ ನಿಮ್ಮ ಸಚಿವರು ಮಾತ್ರ ನಾಟ್‌ ರೀಚೆಬಲ್..!!‌ ಈ ಬಗ್ಗೆ ನೀವು ನಾಡಿನ ಅನ್ನದಾತರ ಕ್ಷಮೆಯಾಚಿಸುವುದಿಲ್ಲವೇ..?
    ಡಿಸಿಎಂ ಶಿವಕುಮಾರ್ ಅವರಿಗೆ ಬೆಂಗಳೂರಿನ ಅಭಿವೃದ್ಧಿಗಿಂತ ತಮ್ಮ ಮುಖ್ಯಮಂತ್ರಿಯ ಕುರ್ಚಿ ಮೇಲೆ ಹೆಚ್ಚು ಗಮನ. ಬೆಂಗಳೂರನ್ನು ನರಕವನ್ನಾಗಿಸಿದಕ್ಕೆ ಬೆಂಗಳೂರಿಗರ ಬಳಿ ನೀವು ಕ್ಷಮೆಯಾಚಿಸುವುದಿಲ್ಲವೇ..?
    ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಪೊಲೀಸರ ಎಚ್ಚರಿಕೆಯನ್ನು ಕಡೆಗಣಿಸಿ, ಸಮಾರಂಭ ಆಯೋಜಿಸಿದ್ದಕ್ಕೆ ಹಾಗೂ ಕಾಂಗ್ರೆಸ್ಸಿಗರ ಫೋಟೋ ಹುಚ್ಚಿಗೆ ಅಮಾಯಕ 11 ಜನ ಬಲಿಯಾಗಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಪ್ರಾಯೋಜಿತ ಈ ಕೊಲೆಗೆ ನೀವು ಕನ್ನಡಿಗರ ಬಳಿ ಕ್ಷಮೆಯಾಚಿಸುವುದಿಲ್ಲವೇ..?
    ಬಡವರು ಹಾಗೂ ಮಧ್ಯಮ ವರ್ಗದವರಿಗೆ ಬೆಲೆಯೇರಿಕೆ ಬರೆ ಎಳೆದ ನೀವು ಅವರ ಬಳಿ ಕ್ಷಮೆಯಾಚಿಸುವುದಿಲ್ಲವೇ..? ಎಂಬ ಹದಿಮೂರು ಪ್ರಶ್ನೆಗಳನ್ನು ಕೇಳಿದೆ.

    ಉಗ್ರ ಕರ್ನಾಟಕ ಕಾಂಗ್ರೆಸ್ ಕೊಲೆ ಚುನಾವಣೆ ತೆಲಂಗಾಣ ನ್ಯಾಯ ಬಿಜೆಪಿ ಬೆಂಗಳೂರು ಮೈ ರಾಹುಲ್ ಗಾಂಧಿ ಲಂಚ ವಾಲ್ಮೀಕಿ ವ್ಯಾಪಾರ ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಡೆತ್ ನೋಟ್ ನಲ್ಲಿ ಸಂಸದ ಡಾ.ಸುಧಾಕರ್ ಹೆಸರು !
    Next Article ಮತಗಳ್ಳತನಕ್ಕೆ ಕುಮಾರಸ್ವಾಮಿ ಪರಿಹಾರ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1xbet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe