ನವದೆಹಲಿ- ಸಂಸದ ರಾಹುಲ್ ಗಾಂಧಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಕಳೆದ 2019ರ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ನೀಡಿದ ಹೇಳಿಕೆ ಪ್ರಧಾನಿ ಮೋದಿ ಅವರನ್ನು ಅಪಮಾನಗೊಳಿಸಿದೆ ಎಂದು ಆರೋಪಿಸಿ ಗುಜರಾತ್ ನ ಸೂರತ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಪ್ರಕಟಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಅದರೆ ಈ ಶಿಕ್ಷೆ ಜಾರಿಗೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.
ಈ ನಡುವೆ ಪ್ರಜಾಪ್ರತಿನಿಧಿ ಕಾಯಿದೆ ಕಲಂ8(1)ರ ಅನ್ವಯ ಕ್ರಮ ಕೈಗೊಂಡಿರುವ ಲೋಕಸಭಾ ಸಚಿವಾಲಯ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದೆ.
ಅದಾನಿ ಪ್ರಕರಣ ಹಾಗೂ ರಾಹುಲ್ ಗಾಂಧಿ ಇತ್ತೀಚೆಗೆ ವಿದೇಶ ಪ್ರವಾಸದಲ್ಲಿ ಮಾಡಿದ ಭಾಷಣ ಕುರಿತು ಸಂಸತ್ ನಲ್ಲಿ ಹೇಳಿಕೆ ನೀಡಲು ಅವಕಾಶ ನೀಡಲು ಕೋರಿ ಲೋಕಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ
2 ಪ್ರತಿಕ್ರಿಯೆಗಳು
i-tec.ru http://www.multimedijnyj-integrator.ru/ .
идея для бизнеса идея для бизнеса .