Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇವಣ್ಣ ಬಂಧನದ ಹಿಂದೆ ಇದೆಯಂತೆ ತಿಮಿಂಗಿಲ.
    ಅಪರಾಧ

    ರೇವಣ್ಣ ಬಂಧನದ ಹಿಂದೆ ಇದೆಯಂತೆ ತಿಮಿಂಗಿಲ.

    vartha chakraBy vartha chakraಮೇ 14, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1025,j:2549462336419412912,t:24041512
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.14:
    ಅಪಹರಣ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇದೆಲ್ಲದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಗುಡುಗಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರುಇಳಿ ವಯಸ್ಸಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಅವರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.
    ವಿಡಿಯೋದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರಕಾರಕ್ಕೆ ಅನುಕಂಪ‌ ಎನ್ನುವುದು ಇದೆಯಾ? ಈ ಪ್ರಕರಣಕ್ಕೆ ಸಂಬಂಧಿಸಿ ನಾನು ಯಾರನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಹಿತಿ ತಂತ್ರಜ್ಞಾನದ ಈ ಕಾಲದಲ್ಲಿ ಅಪರಾಧಿ ನಿರಪರಾಧಿ ಆಗುತ್ತಾನೆ. ಸರಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ಅದನ್ನು ಬಿಟ್ಟು ರೇವಣ್ಣ ಸುತ್ತ ತನಿಖೆ ಗಿರಕಿ ಹೊಡೆಯುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.
    ಆ ಮಹಿಳೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಓರ್ವ ನೊಂದ ಮಹಿಳೆ ದೂರು ಕೊಟ್ಟಿದ್ದಾರೆ. ಆ ಹೆಣ್ಣುಮಗಳಿಗೆ ಹೆದರಿಸಿ‌ ಅವರಿಂದ ದೂರು ಪಡೆಯಲು ಪ್ರಯತ್ನ ಮಾಡಿದ್ದಾರೆ. ಅವರಿಗೆ ಹೆದರಿಸಿ ಬೆದರಿಸಿದವರು ಯಾರು? ಮಫ್ತಿಯಲ್ಲಿ ಅವರ ಮನೆ ಬಳಿ ಹೋಗಿ ಹೆದರಿಸಿದ್ದು ಯಾರು? ಇದೆಲ್ಲಾ ಎಸ್ ಐಟಿಗೆ ಗೊತ್ತಾ? ಎಂದು ಪ್ರಶ್ನಿಸಿದರು.
    ಕೆಲವೇ ದಿನಗಳಲ್ಲಿ ಇದೆಲ್ಲಾ ಹೊರಗೆ ಬರಲಿದೆ. ಮಹಿಳೆಯರಿಗೆ ಬೆದರಿಸಿದ್ದು, ಧಮ್ಕಿ ಹಾಕಿದ್ದು ಎಲ್ಲವೂ ಆಚೆ ಬರಲಿದೆ. ನೀವು ಅದರ ಬಗ್ಗೆ ಏನು ಕ್ರಮ ತಗೊಂಡಿದ್ದೀರಿ ಗೃಹ ಸಚಿವರೇ? ವಕೀಲರಾದ ದೇವರಾಜೇಗೌಡರನ್ನು ಈಗ ಒಂದು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದ್ದು ಯಾಕೆ? ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆ ಆಯಿತು? ಎಂದರು.
    ಆಡಿಯೋ ಮೂಲಕ ಸಿಕ್ಕಿಬಿದ್ದ ದೊಡ್ಡ ತಿಮಿಂಗಲವನ್ನು ಬಿಟ್ಟು ದೇವರಾಜೇಗೌಡರನ್ನು ಬಂಧನ ಮಾಡಿದ್ದಾರೆ.ಹಾಸನದಲ್ಲಿ ಪೆನ್ ಡ್ರೈವ್ ಗಳನ್ನು ಹಂಚಿರುವ ವ್ಯಕ್ತಿಗಳು ಎಲ್ಲಿ? ಎಫ್ ಐಆರ್ ದಾಖಲಾಗಿರುವ ಒಬ್ಬ ವ್ಯಕ್ತಿಯನ್ನೂ ಎಸ್ ಐಟಿ ಹಿಡಿಯಲಿಲ್ಲ. ಬಿಜೆಪಿ ಪಕ್ಷದ ಮಾಜಿ ಶಾಸಕರೊಬ್ಬರ ಎಡಬಲದಲ್ಲಿ ಇದ್ದ ಇಬ್ಬರನ್ನು ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯವಾದವರನ್ನು ಹಿಡಿಯಲಾಗುತ್ತದೆ ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ಹಾಗಾದರೆ, ಎಸ್ ಐಟಿ ತನಿಖೆಯ ಎಲ್ಲಾ ಅಂಶಗಳು ಇವರಿಗೆ ಹೇಗೆ ಸೋರಿಕೆ ಆಗುತ್ತಿವೆ. ಇದಕ್ಕೆ ಸರಕಾರ ಉತ್ತರ ಕೊಡಬೇಕಿದೆ ಎಂದು ಒತ್ತಾಯಿಸಿದರು.
    ವಿಡಿಯೋಗಳನ್ನು ಮೊದಲು ಕದ್ದು ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣನಾದ ಕಾರು ಚಾಲಕನನ್ನು ಇದುವರೆಗೂ ತನಿಖಾ ತಂಡ ಬಂಧನ ಮಾಡಿಲ್ಲ ಯಾಕೆ? ಆದರೆ, ಖಾಸಗಿ ಚಾನಲ್ ನಲ್ಲಿ ಒಂದೂವರೆ ಗಂಟೆ ಕಾಲ ಕೂರಿಸಿಕೊಂಡು ಅವನನ್ನು ಸಂದರ್ಶನ ಮಾಡುತ್ತಾರೆ. ಎಸ್ ಐಟಿ ತಂಡಕ್ಕೆ ಸಿಗದ ಆ ವ್ಯಕ್ತಿ ಸುಲಭವಾಗಿ ಖಾಸಗಿ ಚಾನೆಲ್ ಗೆ ಸಿಗುತ್ತಾನೆ ಎಂದರೆ ಇಲ್ಲಿ ಏನ್ ನಡೆಯುತ್ತಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು
    ಇನ್ನೇನು ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ಹೊರಬರುತ್ತವೆ ಎಂದು ಫೇಸ್ ಬುಕ್ಕಿನಲ್ಲಿ ಸಮಯದ ಸಮೇತ ಪೋಸ್ಟ್ ಹಾಕಿದ್ದ ನವೀನ್ ಗೌಡ ಎನ್ನುವ ವ್ಯಕ್ತಿ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳಿದ್ದಾನೆ. ಅವನು ಏನೆಲ್ಲಾ ಹೇಳಿದ್ದಾನೆ, ಸಾಮಾಜಿಕ ಜಾಲತಾಣಗಳಲ್ಲಿ ಏನೆಲ್ಲಾ ಪೋಸ್ಟ್ ಮಾಡಿದ್ದಾನೆ ಎನ್ನುವುದು ಎಸ್ ಐಟಿಗೆ ಗೊತ್ತಿಲ್ಲವೇ? ಇವನನ್ನು ಹಿಡಿದ್ರಾ? ಎಂದು ಮಾಜಿ ಮುಖ್ಯಮಂತ್ರಿಗಳು ತೀಕ್ಷ್ಣವಾಗಿ ಪ್ರಶ್ನಿಸಿದರು.
    ನಾನು ಎಸ್ ಐಟಿ ಅಧಿಕಾರಿಗಳಿಗೆ ಒಂದು ಮಾತು ಹೇಳಲು ಇಚ್ಛಿಸುತ್ತೇನೆ. ತಮಗೂ ತಂದೆ-ತಾಯಿ ಜನ್ಮ ಕೊಟ್ಟಿದ್ದಾರೆ. ಅಕ್ಕ ತಂಗಿ ಎಲ್ಲರೂ ನಿಮಗೂ ಇರುತ್ತಾರೆ. ದಯಮಾಡಿ ಪ್ರಾಮಾಣಿಕವಾಗಿ ತನಿಖೆ ನಡೆಸಿ. ಚುನಾವಣೆ ಸಂದರ್ಭದಲ್ಲಿ ಪೆನ್ ಡ್ರೈವ್ ಹಂಚಿ ಅಶ್ಲೀಲ ದೃಶ್ಯಗಳ ಮೂಲಕ ಸಮಾಜದಲ್ಲಿ ಕೆಟ್ಟ ಪರಿಸ್ಥಿತಿಯನ್ನು ಸೃಷಿ ಮಾಡಿದರಲ್ಲ, ಅವರನ್ನು ಇಲ್ಲಿಯವರೆಗೆ ನೀವು  ಮುಟ್ಟಿಲ್ಲ. ಘಟನೆಗೆ ಕಾರಣನಾದ ವ್ಯಕ್ತಿಯನ್ನೂ ಹಿಡಿಯಲಿಲ್ಲ. ಇದೆಲ್ಲವನ್ನೂ ಮಾಡಬೇಕಾದ್ದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
    ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣ ಕೂಡ ಆರೋಪ ಎದುರಿಸಬೇಕಾಯಿತು. ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೂ ಹೇಳಬಯಸುತ್ತೇನೆ. ಇದು ಪಟಾಕಿ ಸಿಡಿಸಿ ಸಂತೋಷಪಡುವ ಸಮಯ ಅಲ್ಲ. ಇಡೀ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾದಾಗ ಸಂಭ್ರಮಿಸಿ. ಈ ಘಟನೆ ರಾಜ್ಯವೇ ತಲೆ ತಗ್ಗಿಸುವಂತಹ ಘಟನೆ ಎಂದು ಹೇಳಿದರು.

    #hdrevanna #kumaraswamy #prajwalrevanna hdk ಕಾಂಗ್ರೆಸ್ ಕಾರು ಚುನಾವಣೆ ತಂತ್ರಜ್ಞಾನ ನ್ಯಾಯ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    Next Article ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    1 ಟಿಪ್ಪಣಿ

    1. ThomasAbini on ನವೆಂಬರ್ 26, 2025 3:02 ಅಪರಾಹ್ನ

      ?Celebremos a cada aficionado al azar !
      destacan entre casinos sin registro.
      destacan entre casinos sin registro.
      Descubre nichos en casino online sin licencia espaГ±a Гєnicos – https://caponesaurora.es/#
      ?Que la fortuna te favorezca con que disfrutes de asombrosos triunfos !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_ekOn ರಲ್ಲಿ ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • DonaldFrups ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • kypit kyrsovyu_xdPi ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe