ಬೆಂಗಳೂರು,ನ. 21-
ನಿಗಧಿತ ಆದಾಯ ಮೂಲ ಮೀರಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವ ದೂರುಗಳ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಸೇರಿದಂತೆ ನಾಲ್ವರು ಹಿರಿಯ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಅಪಾರ ಪ್ರಮಾಣದ ನಗದು,ಆಸ್ತಿ,ಪಾಸ್ತಿ ದಾಖಲೆ ವಶ ಪಡಿಸಿಕೊಂಡಿದ್ದಾರೆ.
ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಇಲಾಖೆಯ ಅಧೀಕ್ಷಕ ಮೋಹನ್.ಕೆ,ಯೋಜನಾ ಇಲಾಖೆಯ ನಿರ್ದೇಶಕ ಎನ್.ಕೆ.ತಿಪ್ಪೇಸ್ವಾಮಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎಂ.ಸಿ.ಕೃಷ್ಣವೇಣಿ ಅವರನ್ನು ಬಲೆಗೆ ಕೆಡವಿ ಪತ್ತೆ ಹಚ್ಚಿದ ನಗದು, ಚಿನ್ನಾಭರಣ, ಐಷಾರಾಮಿ ವಸ್ತುಗಳು ಸೇರಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ಗಳ ಪರಿಶೀಲನೆ ನಡೆಸಿದ್ದಾರೆ
ಅಬಕಾರಿ ಇಲಾಖೆ ಎಸ್ಪಿ ಮೋಹನ್ ಅವರ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ಪತ್ತೆಹಚ್ಚಿದ್ದಾರೆ. ಮೋಹನ್.ಕೆ. ಅವರ ಕಚೇರಿ ಕನಕಪುರ ರಸ್ತೆಯಲ್ಲಿನ ಮನೆ,ಎನ್.ಕೆ.ತಿಪ್ಪೇಸ್ವಾಮಿ ಅವರ ಕಚೇರಿ, ಬನಶಂಕರಿಯ 1ನೇ ಹಂತದ ಮನೆ ,ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಅವರ ಕಚೇರಿ ಮಂಡ್ಯದ ಮನೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎಂ.ಸಿ.ಕೃಷ್ಣವೇಣಿ ಅವರ ಚಿಕ್ಕಬಳ್ಳಾಪುರದ ಮನೆಗಳಲ್ಲಿ ಮುಂಜಾನೆಯಿಂದಲೇ ಶೋಧ ನಡೆಸಲಾಗಿದೆ.
ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್, ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆ ಮೇಲೆ ದಾಳಿ ನಡೆದಿದೆ.
ಮೂರು ವಾಹನಗಳಲ್ಲಿ ಬಂದ ಅಧಿಕಾರಿಗಳು, ಪೊಲೀಸ್
ಮಂಗಳೂರಿನ ವೇಲೆನ್ಸಿಯಾ ಬಳಿಯ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ಮೆಂಟ್ಗೆ ಬೆಳಗ್ಗೆಯೇ ಮೂರು ವಾಹನಗಳಲ್ಲಿ ಆಗಮಿಸಿದ ಲೋಕಾ ಅಧಿಕಾರಿಗಳು ದಾಳಿ ನಡೆಸಿದರು. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಮಲ್ಲಿಕಟ್ಟೆ ಬಳಿಯ ಕಚೇರಿಗೂ ಲೋಕಾಯುಕ್ತ ಎಂಟ್ರಿಕೊಟ್ಟಿದೆ.
ಮಂಡ್ಯದಲ್ಲಿ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಲೋಕಾಯುಕ್ತ ಅಧಿಕಾರಿಗಳು ದಾಳಿ 30ಕ್ಕೂ ಹೆಚ್ಚು ದಾಳಿ ನಡೆಸಿದ್ದಾರೆ. ಮಹೇಶ್ ಅವರ ಬೆಂಗಳೂರು ಮೈಸೂರು ಮನೆಗಳು, ಅವರ ಮಾವ ಕೃಷ್ಣಪ್ಪ ಅವರ ಮನೆ (ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಗಳ್ಳಿ ಗ್ರಾಮದಲ್ಲಿ ಇರುವ ಮನೆ) ಸೇರಿದಂತೆ ಏಳು ಕಡೆ ದಾಳಿ ನಡೆದಿದೆ.
ಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.
Previous Articleಸ್ಕೂಟರ್ ಗೆ ಜಾಗ ಕೊಡದಿದ್ದಕ್ಕೆ ಆಗಿದ್ದೇನು.
Next Article ಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?