ಬೆಂಗಳೂರು, ಜೂ.12-
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ
ವಿಶೇಷ ತನಿಖಾ ತಂಡ(ಎಸ್ ಐಟಿ)ದ ಅಧಿಕಾರಿಗಳು
ಆತನಿಂದ 16 ಕೆಜಿ ಚಿನ್ನ,10 ಕೋಟಿ ನಗದು ಜಪ್ತಿ ಮಾಡಿದ್ದಾರೆ.
ನಕಲಿ ಖಾತೆ ತೆರೆದ ಸತ್ಯನಾರಾಯಣ ವರ್ಮನನ್ನು ಹೈದರಾಬಾದ್ ನಲ್ಲಿ ಕಾರ್ಯಾಚರಣೆ ಕೈಗೊಂಡು ಬಂಧಿಸಿರುವ ಎಸ್ ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
ಆರೋಪಿಯು ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದು, ಎಲ್ಲಾ 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿತ್ತು.
ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಇದರ ಬೆನ್ನಲ್ಲೇ ನಕಲಿ ಖಾತೆ ತೆರೆದ ವ್ಯಕ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಸ್ಐಟಿ, ಆತನ ಪತ್ತೆಗೆ ಬಲೆ ಬೀಸಿತ್ತು.
ಬಂಧಿತ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ,10 ಕೋಟಿ ನಗದು ಜಪ್ತಿ ಮಾಡಲಾಗಿದ್ದು,ಆತನನ್ನು ಎಸ್ಐಟಿ ಅಧಿಕಾರಿಗಳು ನಗರಕ್ಕೆ ಕರೆತಂದು ಹೆಚ್ಚಿನ ವಿಚಾರಣೆ ಕೈಗೊಳ್ಳಲಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು.
ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ನನ್ನು
ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.ಈ ಮಧ್ಯೆ, ಹಗರಣ ಸಂಬಂಧ ಸಚಿವ ನಾಗೇಂದ್ರ ರಾಜೀನಾಮೆಯನ್ನೂ ನೀಡಿದ್ದಾರೆ
Previous Articleಸಿಲಿಕಾನ್ ಸಿಟಿ ಅಲ್ಲ,Accident ಸಿಟಿ.
Next Article ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ.

2 ಪ್ರತಿಕ್ರಿಯೆಗಳು
Для обеспечения максимальной безопасности на дороге рекомендуем приобрести камера заднего вида для коммерческого транспорта.
Такой обзор особенно полезен при движении назад в тесных местах или на загруженных парковках.
mgm gambling app https://betmgm-play.com/ betmgm MS