ಬೆಂಗಳೂರು,ಜೂ.6- ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ ಹಗರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ದ ಅಧಿಕಾರಿಗಳು ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ಸತ್ಯನಾರಾಯಣ್ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ಖಾತೆಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್ನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು.
ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು, ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ ಐವರನ್ನು ಬಂಧಿಸಲಾಗಿದೆ.
ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಸೇರಿ ಐವರು ಬಂಧಿತ ಆರೋಪಿಗಳಾಗಿದ್ದು,ಇವರನ್ನು ಕಸ್ಟಡಿಗೆ ಪಡೆದು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
Previous Articleಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ.
Next Article ಡ್ರಗ್ಸ್ peddler ಗಳು ಜೊತೆ ತೆಲುಗು ನಟಿಯ ನಂಟು.

