Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ
    Viral

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    vartha chakraBy vartha chakraಜೂನ್ 17, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.17:
    ಪರಿಸರ ಸಂರಕ್ಷಣೆ ದೃಷ್ಟಿಯಿಂದ ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಮ್ಯಾರಥಾನ್ ಗೆ ವಿಧಾನಸೌಧದ ಎದುರು ಚಾಲನೆ ನೀಡಿ ಮಾತನಾಡಿದರು.
    ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಈ ಜಾಗೃತಿ ಕ್ಲಬ್ ಗಳನ್ನು ರಚನೆ ಮಾಡಬೇಕು. ಪ್ರಕೃತಿ ಉಳಿಸುವ ದೊಡ್ಡ ಹೋರಾಟದ ಹಾಗೂ ಜಾಗೃತಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂದು ಈ ಆದೇಶ ಮಾಡಲಾಗಿದೆ. ಒಂದೊಂದು ಶಾಲೆ ಮರ ಬೆಳೆಸಲು ಆಯಾಯ ಪ್ರದೇಶಗಳನ್ನು ದತ್ತು ಪಡೆಯಬೇಕು” ಎಂದು ತಿಳಿಸಿದರು.
    ಹಸಿರು ಮತ್ತು ಸ್ವಚ್ಚತೆ ಇದೇ ನಮ್ಮ ಸರ್ಕಾರದ ಧ್ಯೇಯ. ಇದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವುದು ಸರ್ಕಾರದ ಕರ್ತವ್ಯ. ಕರ್ನಾಟಕದ‌ ದೊಡ್ಡ ಆಸ್ತಿಯೇ ನಮ್ಮ ಪ್ರಕೃತಿ. ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ, ಜವಾಬ್ದಾರಿಯಾಗಬೇಕು” ಎಂದರು.
    ಪ್ರತಿಯೊಬ್ಬ ವಿದ್ಯಾರ್ಥಿ ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ತಿಳಿಸಲಾಗಿದೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಪ್ರಕ್ರಿಯೆಯಲ್ಲಿ ಇದ್ದಾರೆ.‌ ಎರಡು ದಿನದ ಹಿಂದೆ ದೆಹಲಿ,‌ ಅಹಮದಾಬಾದ್‌ ನಲ್ಲಿ‌ ಇದ್ದೆ ಅಲ್ಲಿನ ಉಷ್ಣಾಂಶ ಹತ್ತಿರತ್ತಿರ ‌49 ಡಿಗ್ರಿಯಿತ್ತು.‌ ಬೆಂಗಳೂರಲ್ಲಿ 22- 23 ಇದೆ. ಈ ವಾತಾವರಣ ನಮ್ಮ ಕರ್ನಾಟಕದ,‌ ಬೆಂಗಳೂರಿನ ಆಸ್ತಿ” ಎಂದು ತಿಳಿಸಿದರು.
    ಮನುಷ್ಯ ಹಾಗೂ ಅವನ ಜೀವನ ಪದ್ಧತಿ ಪ್ರಕೃತಿಯ ಜೊತೆ ಬೆಸೆದುಕೊಂಡಿದೆ. ನಾವೆಲ್ಲರೂ ಪರಿಸರದ ಒಂದು ಭಾಗವಷ್ಟೇ. ಶುದ್ದ ಗಾಳಿ, ನೀರು, ಪರಿಸರ ನಿರ್ಮಾಣ ನಮ್ಮೆಲ್ಲರ ಅತಿದೊಡ್ಡ ಜವಾಬ್ದಾರಿ. ಪರಿಸರ ಉಳಿಸುವ ಅರಿವು ಯುವ ಜನಾಂಗಕ್ಕೆ ಬರಬೇಕು. ಪರಿಸರ ನಮ್ಮ‌ ಮನೆ ಅದನ್ನು ನಾಶ‌ ಮಾಡದೇ ಇರುವಂತೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ ಎಂದರು.
    ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯಕ್ಕೆ ಪರಿಸರ ಪ್ರಜ್ಞೆ ಬೆಳೆಯಲಿ ಎಂದು ಸರ್ಕಾರ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಸಚಿವರಾದ ಈಶ್ವರ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದೆ” ಎಂದು ತಿಳಿಸಿದರು.
    ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಿಸ್ತಿಗೆ ಹೆಸರಾದವರು. ನೀವುಗಳು ರಜೆ ಸಮಯದಲ್ಲಿ ವಿಧಾನಸೌಧವನ್ನು ವೀಕ್ಷಣೆ ಮಾಡಬೇಕು. ಇಡೀ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲದ ಕೌತುಕ ಇಲ್ಲಿದೆ. ನ್ಯಾಯಾಂಗ,‌ ಕಾರ್ಯಾಂಗ,‌ ಶಾಸಕಾಂಗ ಒಂದೇ‌ ಕಡೆ‌‌ ಸಮಾಗಮವಾಗಿವೆ. ದೇಶದ ಭವಿಷ್ಯವನ್ನು ಚರ್ಚೆ‌ ಮಾಡುವ ಸ್ಥಳ ಇದಾಗಿದೆ” ಎಂದರು.
    ಹಸಿರು ಉಳಿಸಿ, ಮರ‌ ಬೆಳೆಸಿ.‌ ಕಸ ತ್ಯಜಿಸಿ ಮರ ಬೆಳೆಸಿ‌‌” ಎಂದು ವಿದ್ಯಾರ್ಥಿಗಳೊಟ್ಟಿಗೆ ಡಿಸಿಎಂ ಘೋಷಣೆ ಕೂಗಿದರು.”

    ಕರ್ನಾಟಕ ನ್ಯಾಯ ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಾಲೆ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ರೇಲ್ ಗೆ ಯಾಕೆ ಹೀಗಾಯ್ತು?
    Next Article ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • WilliamRip ರಲ್ಲಿ Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    • tx7qv ರಲ್ಲಿ Modiಗೆ ಅಮೆರಿಕಾದಲ್ಲಿ ಸ್ವಾಗತದ ಸವಿ ಪ್ರತಿಭಟನೆಯ ಬಿಸಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe