ಬೆಂಗಳೂರು,ನ.29-
ವಿಧಾನಸಭೆ ಚುನಾವಣೆಯ ಮುಗಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಕೇಳಿ ಬಂದಿದ್ದ ಮಂತ್ರಿಮಂಡಲ ಪುನರ್ ರಚನೆ ಕೆಪಿಸಿಸಿ ಅಧ್ಯಕ್ಷರಾದ ಬದಲಾವಣೆ ಸೇರಿದಂತೆ ಹಲವು ವಿದ್ಯಮಾನಗಳಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
ಕೋರ್ಟ್ ಆದೇಶದ ಅನ್ವಯ ಯಾವುದೇ ಸಮಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಯಾಗಬಹುದು ರಾಜ್ಯ ಸರ್ಕಾರ ಬರುವ ಏಪ್ರಿಲ್ ನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಾಧ್ಯತೆ ಇದೆ ಅಲ್ಲಿಯವರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಸೂಚಿಸಿದೆ.
ಉಪಚುನಾವಣೆಯ ಗೆಲುವಿನ ಯಶಸ್ಸಿನಿಂದ ಬೀಗುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡಬೇಕು ಎಂದು ಕೋರಿಕೆ ಸಲ್ಲಿಸಿದ್ದರು.
ಕಳೆದ ಐದು ವರ್ಷಗಳಿಂದ ತಾವು ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದೇನೆ ರಾಜ್ಯದಲ್ಲಿ ಪಕ್ಷದ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಶ್ರಮಿಸಿದ್ದು ಇದೀಗ ಉಪಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎರಡು ಹುದ್ದೆಗಳ ಕಾರ್ಯಭಾರ ಒತ್ತಡ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಹೀಗಾಗಿ ತಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು ಎನ್ನಲಾಗಿದೆ.
ಈ ಭೇಟಿಯ ಸಮಯದಲ್ಲಿ ಯಾವುದೇ ಮಾತನಾಡದ ಹೈಕಮಾಂಡ್ ನಾಯಕರು ನಂತರ ನಡೆದ ಎಐಸಿಸಿ ಸಭೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿಯುವವರೆಗೆ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯ ಬೇಕು ಎಂಬ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಪಕ್ಷಕ್ಕೆ ಹೊಸ ಅಧ್ಯಕ್ಷರು ನೇಮಕವಾದರೆ ಅವರು ಚುನಾವಣೆ ಕಾರ್ಯತಂತ್ರ ರೂಪಿಸುವುದು ಕಷ್ಟವಾಗಲಿದೆ ಈಗಾಗಲೇ ಪಕ್ಷದ ಅಧ್ಯಕ್ಷರಾಗಿ ಯಶಸ್ವಿಯಾಗಿರುವ ಶಿವಕುಮಾರ್ ಈ ಹುದ್ದೆಯಲ್ಲಿ ಮತ್ತಷ್ಟು ಕಾಲ ಮುಂದುವರೆದಿದ್ದೆ ಆದಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಸಿಗಲಿದೆ ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ ಎಂದು ವಿವರಿಸಿದರು ಎಂದು ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಕಾರ
Previous Articleವಿಜಯೇಂದ್ರ ಬೆಂಬಲಿಸಿ ದೇಗುಲ ಯಾತ್ರೆ.
Next Article ಮಂತ್ರಿಮಂಡಲಕ್ಕೆ ನಾಗೇಂದ್ರ ಸೇರ್ಪಡೆ