ಬೆಂಗಳೂರು,ಜ.8-
ರಾಜ್ಯ ಕಾಂಗ್ರೆಸ್ ನಲ್ಲಿ ಬಿರುಸಿನ ವಿದ್ಯಮಾನಗಳ ನಡೆಯುತ್ತಿದ್ದು ಉಪಮುಖ್ಯಮಂತ್ರಿಯಾಗಿ ಶಿವಕುಮಾರ್ ಅತ್ಯಂತ ಸಹನೆಯಿಂದ ಎಲ್ಲವನ್ನು ನೋಡುತಿದ್ದು ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸಮೀಪಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿದಾಗಿನಿಂದಲೂ ಶಿವಕುಮಾರ್ ಅವರ ಪ್ರತಿಷ್ಠೆಗೆ ಧಕ್ಕೆ ಬರುವಂತಹ ವಿದ್ಯಮಾನಗಳು ನಡೆಯುತ್ತಿವೆ ಇಂತಹವುಗಳನ್ನು ಸಹಿಸುವ ವ್ಯಕ್ತಿತ್ವ ಶಿವಕುಮಾರ್ ಅವರದ್ದಲ್ಲ ಆದರೆ ಇಲ್ಲಿಯವರೆಗೆ ಅವರು ಹೇಗೆ ಸಹನೆಯಿಂದ ಇದನ್ನು ಸಹಿಸುತ್ತಿದ್ದಾರೊ ಗೊತ್ತಿಲ್ಲ ಎಂದು ಹೇಳಿದರು.
ಸಹನೆ ಎನ್ನುವುದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು.ಈಗ ಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದರು.
ಕಾಂಗ್ರೆಸ್ಸಿನಲ್ಲಿ ಡಿನ್ನರ್ ಮೀಟಿಂಗ್ ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆ ಯುತ್ತಿಲ್ಲ. ಅಂಗನಾವಡಿ ಕಾರ್ಯ ಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
Previous Articleಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
Next Article ಡಿನ್ನರ್ ಪಾಲಿಟಿಕ್ಸ್ ನ ವಿವಾದ