ಬೆಂಗಳೂರು.ಜು,9:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಕರ್ಮಕಾಂಡ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುತ್ತಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಜಮೀನನ್ನು ಸ್ವಾಧೀನ ಪಡಿಸಿಕೊಂಡ ಮುಡಾ ಅಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ.
ಸಿದ್ದರಾಮಯ್ಯ ಅವರ ಪತ್ನಿಯ ಹೆಸರಿನಲ್ಲಿದ್ಧ ಜಮೀನನ್ನು ಅನುಮತಿ ಇಲ್ಲದೆ ವಶಪಡಿಸಿಕೊಂಡ ಮುಡಾ ವಿವಾದದಲ್ಲಿ ಸಿಲುಕಿದೆ.
ನಿವೇಶನವನ್ನು ಅಭಿವೃದ್ಧಿಪಡಿಸಲು ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಪರ್ಯಾಯವಾಗಿ ನಿವೇಶನ ಹಂಚಿಕೆ ಮಾಡಿದೆ. ತಪ್ಪು ಸರಿಪಡಿಸಿಕೊಳ್ಳುವ ದೃಷ್ಟಿಯಿಂದ ಪರ್ಯಾಯ ನಿವೇಶನ ಹಂಚಿಕೆ ಮಾಡಿರುವ ಮುಡಾ ಕ್ರಮ ವಿವಾದ ಸೃಷ್ಟಿಸಿದೆ. ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಈ ವಿದ್ಯಮಾನದಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿ ಮುಖ್ಯಮಂತ್ರಿ ಅವರ ಪತ್ನಿಗೆ ನಿವೇಶನ ಶರಣರ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಇದರ ಬೆನ್ನಲ್ಲೇ ಇದೀಗ, ನಕಲಿ ದಾಖಲೆ ಸೃಷ್ಟಿಸಿ ಮುಡಾಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ಬಾವಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ವಿವಾದಿತ ಜಾಗದ ಮಾಲೀಕ ಎನ್ನಲಾಗಿರುವ ದೇವರಾಜು ಎಂಬುವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿ, ತಹಶೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಆಯುಕ್ತರು ಸೇರಿದಂತೆ ಅಧಿಕಾರಿಗಳೂ
ಶಾಮೀಲಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಕೋರಲಾಗಿದೆ. ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಲಾಗಿದೆ.
Previous Articleದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ
Next Article ಚೆಡ್ಡಿ ಗ್ಯಾಂಗ್ ಗೆ ಗುಂಡಿಕ್ಕಿದ ಪೊಲೀಸ್.