ಬೆಂಗಳೂರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಅಕ್ರಮ ಆರೋಪ ಹಠಾತ್ ತೀವ್ರ ಸ್ವರೂಪ ಪಡೆದುಕೊಂಡಿದೆ.
ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಸಿಲುಕಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ರಾಜ್ಯಪಾಲ ತಾವರ ಚೆಂದ ಗೆಹಲೋಟ್ ಅನುಮತಿ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಜಮೀನನ್ನು ಸ್ವಾಧೀನ ಪಡಿಸಿಕೊಂಡ ಮುಡಾ ಅದಕ್ಕೆ ಪರ್ಯಾಯವಾಗಿ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 14 ನಿವೇಶನಗಳನ್ನು ನೀಡಿದೆ.
ಈ ಪ್ರಕ್ರಿಯೆಯಲ್ಲಿ ಸ್ಜಜನ ಪಕ್ಷಪಾತ ಹಾಗೂ ಅಧಿಕಾರ ದುರ್ಬಳಕೆ ನಡೆದಿದೆ ಎಂದು ಆರೋಪಿಸಿದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಎಂಬುವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದರು. ತಕ್ಷಣವೇ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶೋಕಾಸ್ ಪಡೆಯಲು ರಾಜ್ಯಪಾಲರಿಗೆ ಸಲಹೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದರು.
ಇದಾದ ಬಳಿಕ ರಾಜ್ಯಪಾಲರು ದೂರುದಾರನ ಮನವಿ ಮತ್ತು ರಾಜ್ಯ ಸರ್ಕಾರ ನೀಡಿರುವ ಸಲಹೆಯ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಬಳಿಕ ಕೇಂದ್ರ ಗೃಹ ಮತ್ತು ಕಾನೂನು ಇಲಾಖೆಯ ಅಭಿಪ್ರಾಯ ಪಡೆದಿದ್ದು ಇದೀಗ ಮುಖ್ಯಮಂತ್ರಿ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡಿದ್ದಾರೆ.
ಈ ಬೆಳವಣಿಗೆ ಕರ್ನಾಟಕದಲ್ಲಿ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷಕ್ಕೆ ವೇದಿಕೆ ಸೃಷ್ಟಿಸಿದೆ.
Previous Articleವಿಜಯೇಂದ್ರ ಕೈ ಕಟ್ಟಿ ಹಾಕಿದ ಬಿ ಎಲ್ ಸಂತೋಷ್.
Next Article ರಾಜ್ಯಪಾಲರ ವಜಾಕ್ಕೆ ಖಂಡ್ರೆ ಆಗ್ರಹ.