ಬೆಂಗಳೂರು,ಸೆ. 20-
ಪ್ರಕರಣಗಳ ವಿಚಾರಣೆ ಸಮಯದಲ್ಲಿ ಸುತ್ತಿದಾಯಕ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಸುದ್ದಿಯಾಗುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಈಗ ಸುಪ್ರೀಂ ಕೋರ್ಟ್ ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪ್ರಕರಣವೊಂದರ ವಿಚಾರಣೆ ಸಮಯದಲ್ಲಿ ನ್ಯಾಯಮೂರ್ತಿ ಶ್ರೀಶಾನಂದ ಅವರು ಬೆಂಗಳೂರಿನ ಸಂಚಾರ ದಟ್ಟಣೆ ಕುರಿತು ಮಾತನಾಡುತ್ತಾ ಕೆಲವು ಪ್ರದೇಶಗಳನ್ನು ಇವುಗಳು ಪಾಕಿಸ್ತಾನದಲ್ಲಿ ಇದ್ದಂತಿವೆ ಎಂದು ಹೇಳಿದ್ದರು.
ನ್ಯಾಯಮೂರ್ತಿಗಳ ಈ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುವ ಮೂಲಕ ಅನೇಕ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ನ್ಯಾಯಮೂರ್ತಿ ಸ್ಥಾನದಲ್ಲಿ ಕುಳಿತಿರುವ ಇವರು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿರುವ ಪ್ರದೇಶವನ್ನು ಪಾಕಿಸ್ತಾನ ಎಂದು ಉಲ್ಲೇಖಿಸಿದ್ದು ಅನೇಕರ ಅಸಮಾಧಾನಕ್ಕೆ ಕಾರಣವಾಗಿತ್ತು ಹಲವು ಮಂದಿ ಹಿರಿಯ ನ್ಯಾಯವಾದಿಗಳು ಇದನ್ನು ತೀವ್ರವಾಗಿ ಖಂಡಿಸಿದ್ದರು.
ಇದಷ್ಟೇ ಅಲ್ಲದೆ ಪ್ರಕರಣ ಒಂದರ ವಿಚಾರಣೆ ಸಮಯದಲ್ಲಿ ಮಹಿಳಾ ನ್ಯಾಯವಾದಿಯೊಬ್ಬರನ್ನು ಇವರು ತರಾಟೆಗೆ ತೆಗೆದುಕೊಂಡಿದ್ದು ದೊಡ್ಡ ಮಟ್ಟದ ಸುದ್ದಿಯಾಗಿ ಜಾಲತಾಣಗಳಲ್ಲಿ ಹರಿದಾಡಿತ್ತು.
ನ್ಯಾಯಮೂರ್ತಿಗಳ ಅಭಿಪ್ರಾಯ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿರುವುದನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರ ಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಸಭೆ ಸೇರಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಅಭಿಪ್ರಾಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ನ್ಯಾಯಮೂರ್ತಿ ಶ್ರೀಶಾನಂದ ಅವರು ನೀಡಿರುವ ಹೇಳಿಕೆಯ ಬಗ್ಗೆ ಸಮಗ್ರ ವರದಿ ಪಡೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ರಿಜಿಸ್ಟರ್ ಅವರಿಗೆ ಸೂಚನೆ ನೀಡಿತು. ಸಾಮಾಜಿಕ ಜಾಲತಾಣಗಳು ಹೆಚ್ಚು ಸಕ್ರಿಯವಾಗಿರುವ ಈ ಸಮಯದಲ್ಲಿ ನ್ಯಾಯಮೂರ್ತಿಗಳು ಅತ್ಯಂತ ಜಾಗರೂಕತೆಯಿಂದ ವರ್ತಿಸಬೇಕಾಗುತ್ತದೆ ನ್ಯಾಯಮೂರ್ತಿಗಳ ನಡೆ- ನುಡಿ ಆಚಾರ -ವಿಚಾರಗಳನ್ನು ದೊಡ್ಡ ಸಂಖ್ಯೆಯಲ್ಲಿ ಜನರು ಗಮನಿಸುತ್ತಿರುತ್ತಾರೆ ಹೀಗಾಗಿ ನಾವು ಹೆಚ್ಚು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ನ್ಯಾಯ ಪೀಠ ಅಭಿಪ್ರಾಯ ಪಟ್ಟಿದೆ.
ಈ ವೇಳೆ ವಾದ ಮಂಡಿಸಿದ ಅಟಾರ್ನಿ ಜನರಲ್ ಸಾಮಾಜಿಕ ಜಾಲತಾಣದ ಈ ಯುಗದಲ್ಲಿ ನ್ಯಾಯಮೂರ್ತಿಗಳ ಕಾರ್ಯ ಶೈಲಿಯ ಬಗ್ಗೆ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಅಂತಿಮವಾಗಿ ನ್ಯಾಯಾಪೀಠ ವಿದ್ಯಮಾನದ ಬಗ್ಗೆ ಕರ್ನಾಟಕ ಹೈಕೋರ್ಟ್ ರಿಜಿಸ್ಟರ್ ಅವರಿಗೆ ಸಮಗ್ರ ವರದಿ ನೀಡುವಂತೆ ಸೂಚಿಸಲು ನಿರ್ಧರಿಸಿತು ಜೊತೆಗೆ ನ್ಯಾಯಮೂರ್ತಿಗಳ ಕಾರ್ಯವೈಖರಿ ಬಗ್ಗೆ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಯ ಬಗ್ಗೆ ವರದಿ ನೀಡುವಂತೆ ಸೂಚಿಸಿತು.
Previous Articleಪ್ರಜ್ವಲ್ ಗೆ ಏನೂ ಗೊತ್ತಾಗಲ್ಲ ಅಂದ್ರು ರೇವಣ್ಣ.
Next Article ಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.


1 ಟಿಪ್ಪಣಿ
Bouclier Apextrail
Das Bouclier Apextrail-System ist gepragt durch seine vollig neuartige und fortschrittlichste Investitionsplattform fur Kryptowahrungen, die die Leistungsfahigkeit kunstlicher Intelligenz nutzt, um ihren Usern wichtige Pluspunkte im Wettbewerb zu sichern.